ADVERTISEMENT

ದೆಹಲಿಗೆ ಬರಬೇಡಿ: ಡಿ.ಕೆ. ಸುರೇಶ್ ಮನವಿ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2019, 3:52 IST
Last Updated 25 ಸೆಪ್ಟೆಂಬರ್ 2019, 3:52 IST
   

ಬೆಂಗಳೂರು: ‘ಜಾರಿ ನಿರ್ದೇಶನಾಲಯದ ವಿಶೇಷ ನ್ಯಾಯಾಲಯದಲ್ಲಿ ಮಂಗಳವಾರ ಶಾಸಕ ಶಿವಕುಮಾರ್ ವಿಚಾರಣೆ ನಡೆಯಲಿದ್ದು, ಈ ಸಮಯದಲ್ಲಿ ಅಭಿಮಾನಿಗಳು, ಕಾಂಗ್ರೆಸ್ ಕಾರ್ಯಕರ್ತರು ದೆಹಲಿಗೆ ಬರುವುದು ಬೇಡ’ ಎಂದು ಸಂಸದ ಡಿ.ಕೆ.ಸುರೇಶ್ ಮನವಿ ಮಾಡಿದ್ದಾರೆ.

‘ವಿಚಾರಣೆ ಸಮಯದಲ್ಲಿ ಹೆಚ್ಚು ಜನರು ನ್ಯಾಯಾಲಯದ ಆವರಣ ಹಾಗೂ ಇತರೆಡೆ ಜಮಾಯಿಸುವುದರಿಂದ ನ್ಯಾಯಾಂಗ ಪ್ರಕ್ರಿಯೆ, ಆಡಳಿತಾತ್ಮಕ ವ್ಯವಸ್ಥೆಗೆ ಸಮಸ್ಯೆ ಎದುರಾಗಲಿದೆ. ಹಾಗಾಗಿ ದೆಹಲಿಗೆ ಬರಬೇಡಿ’ ಎಂದು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT