ADVERTISEMENT

ಲೋಡ್ ಶೆಡ್ಡಿಂಗ್ ಮಾಡದಂತೆ ಅಧಿಕಾರಿಗಳಿಗೆ ಸಿ.ಎಂ ಸೂಚನೆ

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2018, 6:43 IST
Last Updated 24 ಅಕ್ಟೋಬರ್ 2018, 6:43 IST
   

ಬೆಂಗಳೂರು: ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಮಾಡದಂತೆ ಇಂಧನ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಜೊತೆಗಿನ ಒಪ್ಪಂದದ ಪ್ರಕಾರ ರಾಜ್ಯಕ್ಕೆ ಕೊಡಬೇಕಿದ್ದ ಕಲ್ಲಿದ್ದಲು ಪೂರೈಕೆ ಆಗದಿರುವುದರಿಂದ ರಾಯಚೂರು ಶಾಖೋತ್ಪನ್ನ ವಿದ್ಯುತ್ ಘಟಕದಲ್ಲಿ ವಿದ್ಯುತ್ ಉತ್ಪಾದನೆ ಕುಂಠಿತವಾಗಿದೆ.

ಕೇಂದ್ರದ ವಿದ್ಯುತ್ ಗ್ರಿಡ್‌ನಿಂದಲೂರಾಜ್ಯಕ್ಕೆ ಸಮ ಪ್ರಮಾಣದಲ್ಲಿ ವಿದ್ಯುತ್‌ ಪೂರೈಕೆ ಆಗುತ್ತಿಲ್ಲ. ಹಾಗಾಗಿಯುೂ ಸೋಲಾರ್‌ ಮತ್ತು ಹೈಡ್ರೊ ಪವರ್‌ ಆಧರಿಸಿ ಲೋಡ್ ಶೆಡ್ಡಿಂಗ್ ಇಲ್ಲದೆ ರಾಜ್ಯದಲ್ಲಿ ವಿದ್ಯುತ್ ಸರಬರಾಜು ಮಾಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಆದೇಶ ನೀಡಿದ್ದಾರೆ.

ADVERTISEMENT

ಕೆಲವು ಮಾಧ್ಯಮಗಳಲ್ಲಿ ಲೋಡ್ ಶೆಡ್ಡಿಂಗ್‌ಗೆ ಆದೇಶ ಹೊರಡಿಸಲಾಗಿದೆ ಎಂಬ ಸುದ್ದಿ ಬಂದ ಹಿನ್ನೆಲೆಯಲ್ಲಿ ಕೆಪಿಟಿಸಿಎಲ್ ಅಧಿಕಾರಿಗಳಿಗೆ ಮುಖ್ಯಮಂತ್ರಿ ಈ ಸೂಚನೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.