ADVERTISEMENT

ವಿಧಾನಸೌಧದಲ್ಲಿ ಮಾಧ್ಯಮಗಳ ಸಂದರ್ಶನಕ್ಕೆ ಜಾಗ ನಿಗದಿ: ವಾರ್ತಾ ಇಲಾಖೆಗೆ DPAR ಪತ್ರ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 8:04 IST
Last Updated 18 ಫೆಬ್ರುವರಿ 2026, 8:04 IST
   

ಬೆಂಗಳೂರು: ವಿಧಾನಸೌಧದ ಆವರಣದಲ್ಲಿ ನಿಗದಿಪಡಿಸಿದ ಸ್ಥಳದಲ್ಲಿ ಮಾತ್ರ ಸಂದರ್ಶನ ಮಾಡುವಂತೆ ಮಾಧ್ಯಮದವರಿಗೆ ನಿರ್ದೇಶನ ನೀಡುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯು (DPAR) ವಾರ್ತಾ ಇಲಾಖೆಗೆ ಪತ್ರ ಬರೆದಿದೆ.

‌ಪತ್ರದಲ್ಲಿ ಏನಿದೆ?

ವಾರ್ತಾ ಮತ್ತು ಪ್ರಚಾರ ಇಲಾಖೆಯು ಶಿಫಾರಸ್ಸು ಮಾಡುವ ಮಾಧ್ಯಮ ಪ್ರತಿನಿಧಿಗಳಿಗೆ ಮಾತ್ರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ (ಕಾರ್ಯಕಾರಿ)ಯಲ್ಲಿ ಗುರುತಿನ ಚೀಟಿ ವಿತರಿಸಲಾಗುತ್ತಿದೆ, ಈ ರೀತಿ ಗುರುತಿನ ಚೀಟಿ ಹೊಂದಿರುವ ಎಲ್ಲಾ ಪತ್ರಿಕಾ ಮಾಧಮ ಪ್ರತಿನಿಧಿಗಳಿಗೆ ಭದ್ರತಾ ಹಿತದೃಷ್ಟಿಯಿಂದ ವಿಧಾನಸೌಧ ಪಶ್ಚಿಮ ದ್ವಾರದ ಪೋರ್ಟಿಕೋ ಬಳಿ ನಿಗದಿಪಡಿಸಲಾಗಿರುವ ಸ್ಥಳದಲ್ಲಿ ಮಾತ್ರ ಹೇಳಿಕೆಗಳನ್ನು ಪಡೆದುಕೊಳ್ಳುವಂತೆ ಎಂದು ಸೂಚಿಸಲಾಗಿದೆ.

ಪತ್ರದ ಪ್ರತಿ

ADVERTISEMENT

ವಿಧಾನಸೌಧ ಒಳ ಪ್ರವೇಶಿಸುವ ಸಂದರ್ಭದಲ್ಲಿ ಮುಖ್ಯಮಂತ್ರಿ, ಸಚಿವರು ಅಥವಾ ಗಣ್ಯ ವ್ಯಕ್ತಿಗಳಿಂದ ಬೈಟ್ ಪಡೆಯಲು ಅವರನ್ನು ಹಿಂಬಾಲಿಸದಂತೆ ಸೂಕ್ತ ಸಲಹೆ/ಸೂಚನೆಗಳನ್ನು ನೀಡುವಂತೆಯೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.