
ಪ್ರಜಾವಾಣಿ ವಾರ್ತೆ
ಬೆಂಗಳೂರು: ರಾಜ್ಯದಲ್ಲಿನ 800ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಮೇಲ್ದರ್ಜೆಗೇರಿಸಲು ವಿಸ್ತೃತ ಯೋಜನಾ ವರದಿ (ಡಿಪಿಆರ್) ತಯಾರಿಸಲು ಶಾಲಾ ಶಿಕ್ಷಣ ಇಲಾಖೆ ಟೆಂಡರ್ ಆಹ್ವಾನಿಸಿದೆ.
ಕರ್ನಾಟಕ ಸಾರ್ವಜನಿಕ ಸಂಗ್ರಹಣೆಯಲ್ಲಿ ಪಾರದರ್ಶಕತೆ ಕಾಯ್ದೆ (ಕೆಟಿಪಿಪಿ) ಅನ್ವಯ ಪ್ರಕ್ರಿಯೆ ನಡೆಯಬೇಕು. ರಾಷ್ಟ್ರೀಯ ಕಟ್ಟಡ ಸಂಹಿತೆ, ಲೋಕೋಪಯೋಗಿ ಇಲಾಖೆಯ ಸಾಮಾನ್ಯ ದರಪಟ್ಟಿ, ಶಾಲೆಯ ಅಗತ್ಯ, ಭೌಗೋಳಿಕ ಪರಿಸರ ಹಾಗೂ ಲಭ್ಯವಿರುವ ಮೂಲಸೌಕರ್ಯಗಳನ್ನು ಆಧರಿಸಿ ಡಿಪಿಆರ್ ಸಿದ್ಧಪಡಿಸಬೇಕು ಎಂದು ಸೂಚಿಸಲಾಗಿದೆ. ಡಿಪಿಆರ್ ತಯಾರಿಕೆಗೆ ಇಲಾಖೆ ₹18 ಕೋಟಿ ಅನುದಾನ ಮೀಸಲಿಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.