ADVERTISEMENT

ಶಾಲಾ ತರಗತಿಗಳಿಗೆ ಆತಂಕವಿಲ್ಲ: ಡಾ.ಕೆ. ಸುಧಾಕರ್‌

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 19:31 IST
Last Updated 9 ನವೆಂಬರ್ 2021, 19:31 IST
ಡಾ.ಕೆ. ಸುಧಾಕರ್
ಡಾ.ಕೆ. ಸುಧಾಕರ್   

ಬೆಂಗಳೂರು: ರಾಜ್ಯದಲ್ಲಿ 18 ವರ್ಷದೊಳಗಿನವರಲ್ಲಿ ಕೋವಿಡ್‌ ಸೋಂಕಿನ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.13ರಷ್ಟಿದ್ದು, ಶಾಲಾ ತರಗತಿಗಳನ್ನು ಮುಂದುವರಿಸುವುದಕ್ಕೆ ಯಾವುದೇ ಆತಂಕಗಳಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ಹೇಳಿದರು.

ಕೋವಿಡ್‌ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರ ಜತೆ ಮಂಗಳವಾರ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಕಡಿಮೆಯೇ ಇದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರಲ್ಲಿ ಕಡಿಮೆ ಪ್ರಮಾಣದಲ್ಲಿ ಸೋಂಕು ಪತ್ತೆಯಾಗುತ್ತಿರುವುದು ಸಂತೋಷದ ವಿಷಯ. ಇದರಿಂದಾಗಿ ಶಾಲಾ ತರಗತಿಗಳನ್ನು ನಿರಾಳವಾಗಿ ಮುಂದುವರಿಸಬಹುದು’ ಎಂದರು.

ವಿದೇಶಗಳಲ್ಲಿ ಕೋವಿಡ್‌ ಸೋಂಕಿನ ಪ್ರಸರಣದ ಸ್ಥಿತಿ ಕುರಿತು ತಜ್ಞರ ಜತೆ ಚರ್ಚಿಸಲಾಗಿದೆ. ದೇಶದ ಇತರ ರಾಜ್ಯಗಳಲ್ಲಿರುವ ಪರಿಸ್ಥಿತಿಯ ಬಗ್ಗೆಯೂ ಮಾಹಿತಿ ಪಡೆಯಲಾಗಿದೆ. ರಾಜ್ಯದಲ್ಲಿ ಮೂರನೇ ಅಲೆ ಬಾರದಂತೆ ತಡೆಯುವುದು ಮತ್ತು ಕೋವಿಡ್‌ ಲಸಿಕೆ ನೀಡುವ ಪ್ರಕ್ರಿಯೆಗೆ ವೇಗ ತುಂಬುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು ಎಂದು ತಿಳಿಸಿದರು.

ADVERTISEMENT

ಬೇರೆ ರಾಷ್ಟ್ರಗಳು ಕೋವಿಡ್‌ ನಿಯಂತ್ರಣಕ್ಕೆ ಕೈಗೊಂಡಿರುವ ಅತ್ಯುತ್ತಮ ಕ್ರಮಗಳ ಕುರಿತು ತಜ್ಞರು ಮಾಹಿತಿ ಹಂಚಿಕೊಂಡಿದ್ದಾರೆ. ಅಂತಹ ಕ್ರಮಗಳನ್ನು ರಾಜ್ಯದಲ್ಲೂ ಅಳವಡಿಸುವ ಕುರಿತು ಪರಿಶೀಲಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.