ಮೈಸೂರು: ದಸರಾ ಮಹೋತ್ಸವ ಉದ್ಘಾಟನೆಗೆ, ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಶನಿವಾರ ತಿಳಿಸಿದ್ದಾರೆ.
ಅ.17ರಂದು ಚಾಮುಂಡಿ ಬೆಟ್ಟದಲ್ಲಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಅವರು ಉತ್ಸವಕ್ಕೆ ಚಾಲನೆನೀಡಲಿದ್ದಾರೆ. ‘ಈ ಅವಕಾಶವು, ಕೋವಿಡ್ ವಿರುದ್ಧದ ಹೋರಾಟದಲ್ಲಿ ತೊಡಗಿರುವವರಿಗೆ ಸಂದ ಗೌರವ’ ಎಂದು ಡಾ.ಮಂಜುನಾಥ್ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.