ಮೈಸೂರು: ವರುಣಾ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಅವರಿಗೆ ಕೋವಿಡ್ ಇರುವುದು ದೃಢಪಟ್ಟಿದ್ದು, ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
‘ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು ಕ್ವಾರಂಟೈನ್‌ಗೆ ಒಳಗಾಗಿ ಮುಂಜಾಗ್ರತೆ ವಹಿಸುವಂತೆ ಕೋರುತ್ತೇನೆ’ ಎಂದು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ಯತೀಂದ್ರ ಅವರ ತಂದೆ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೂ ಕೋವಿಡ್ ದೃಢಪಟ್ಟಿತ್ತು. ಅವರು ಆ.3 ರಂದು ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.