ADVERTISEMENT

ಜಿ.ಪಂ., ತಾ.ಪಂ. ಮೀಸಲಾತಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 1 ಜುಲೈ 2021, 20:29 IST
Last Updated 1 ಜುಲೈ 2021, 20:29 IST

ಬೆಂಗಳೂರು: ರಾಜ್ಯದ ಎಲ್ಲ ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳ ಮೀಸಲಾತಿ ಪಟ್ಟಿಯ ಕರಡು ಅಧಿಸೂಚನೆಗಳನ್ನು ರಾಜ್ಯ ಚುನಾವಣಾ ಆಯೋಗ ಗುರುವಾರ ರಾತ್ರಿ ಪ್ರಕಟಿಸಿದೆ.

ಸದ್ಯ ಎಲ್ಲ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾಯಿತ ಸದಸ್ಯರ ಅಧಿಕಾರದ ಅವಧಿ ಏಪ್ರಿಲ್‌ ಅಂತ್ಯದಲ್ಲೇ ಕೊನೆಗೊಂಡಿದೆ. ಕೋವಿಡ್‌ ಕಾರಣದಿಂದ ಚುನಾವಣೆ ವಿಳಂಬವಾಗಿದ್ದು, ಆಡಳಿತಾಧಿಕಾರಿಗಳನ್ನು ನೇಮಿಸಲಾಗಿದೆ. ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಗೆ ಸಿದ್ಧತೆ ಮುಂದುವರಿಸಿರುವ ರಾಜ್ಯ ಚುನಾವಣಾ ಆಯೋಗವು, ಕರಡು ಮೀಸಲಾತಿ ಪಟ್ಟಿಯನ್ನು ಅಂತಿಮಗೊಳಿಸಿದೆ.

ಇ– ರಾಜ್ಯಪತ್ರದ ಮೂಲಕ ಎಲ್ಲ ಕ್ಷೇತ್ರಗಳ ಮೀಸಲಾತಿ ಪಟ್ಟಿಗಳನ್ನು ಪ್ರಕಟಿಸಲಾಗಿದೆ. ಆಕ್ಷೇಪಣೆ ಸಲ್ಲಿಸಲು ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ. ಯಾವುದೇ ಆಕ್ಷೇಪಣೆಗಳು ಇದ್ದರೆ ಜುಲೈ 8ರೊಳಗೆ ‘ಕಾರ್ಯದರ್ಶಿ, ರಾಜ್ಯ ಚುನಾವಣಾ ಆಯೋಗ, ಒಂದನೇ ಮಹಡಿ, ಕೆಎಸ್‌ಸಿಎಂಎಫ್‌ ಕಟ್ಟಡ (ಹಿಂಭಾಗ), ನಂ. 8, ಕನ್ನಿಂಗ್‌ ಹ್ಯಾಂ ರಸ್ತೆ, ಬೆಂಗಳೂರು– 560052’ ಈ ವಿಳಾಸಕ್ಕೆ ಸಲ್ಲಿಸುವಂತೆ ಆಯೋಗ ಸೂಚಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.