ADVERTISEMENT

ಕಲುಷಿತ ನೀರು ಕುಡಿದು ಗಂಡಾನೆ ಸಾವು

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2019, 8:36 IST
Last Updated 12 ಆಗಸ್ಟ್ 2019, 8:36 IST
ಮಲೆಮಹದೇಶ್ವರ ವನ್ಯಧಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಗಂಡಾನೆ
ಮಲೆಮಹದೇಶ್ವರ ವನ್ಯಧಾಮದಲ್ಲಿ ಕಲುಷಿತ ನೀರು ಸೇವಿಸಿ ಮೃತಪಟ್ಟಿರುವ ಗಂಡಾನೆ   

ಹನೂರು: ತಾಲ್ಲೂಕಿನ ಮಲೆಮಹದೇಶ್ವರ ವನ್ಯಧಾಮದಲ್ಲಿ ಕಲುಷಿತ ನೀರು ಸೇವಿಸಿ 35 ವರ್ಷದ ಗಂಡಾನೆ ಮೃತಪಟ್ಟಿದೆ.

‌‌ಹನೂರು ಬಫರ್ ವಲಯದ ಬಾವಿಹಳ್ಳ ಅರಣ್ಯ ಪ್ರದೇಶದಲ್ಲಿ ಕೆಸರುಮಿಶ್ರಿತ ಕಲುಷಿತ ನೀರು ಕುಡಿದು ಸಾವನ್ನಪ್ಪಿದೆ. ಸ್ಥಳಕ್ಕೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುತ್ತೇಗೌಡ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ರಾಮಾಪುರ ಪಶು ವೈದ್ಯಾಧಿಕಾರಿ ಸಿದ್ದರಾಜು ಮರಣೋತ್ತರ ಪರೀಕ್ಷೆ ನಡೆಸಿದ್ದು, ಕಲುಷಿತ ನೀರೇ ಆನೆ ಸಾವಿಗೆ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.