ADVERTISEMENT

1 ವರ್ಷ ವಿದ್ಯುತ್‌ ದರ ಏರಿಕೆ ನಿರ್ಧಾರ ಕೈಬಿಡಿ: ಕುಮಾರಸ್ವಾಮಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2020, 11:05 IST
Last Updated 5 ನವೆಂಬರ್ 2020, 11:05 IST
   

ಬೆಂಗಳೂರು: ವಿದ್ಯುತ್ ದರ ಏರಿಕೆ ಖಂಡಿಸಿ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಂದು ವರ್ಷ ಕಾಲ ದರ ಏರಿಕೆ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು ಎಂದು ಆಗ್ರಹಿದ್ದಾರೆ.

ಗುರುವಾರ ಟ್ವೀಟ್ ಮಾಡಿರುವ ಅವರು ಕೊರೋನಾ ಸೋಂಕು ಹಾಗೂ ನೆರೆ ಹಾವಳಿಯಿಂದ ತತ್ತರಿಸಿರುವ ಜನತೆಯ ಮೇಲೆ ಕನಿಷ್ಠ ಒಂದು ವರ್ಷ ವಿದ್ಯುತ್ ದರ ಏರಿಕೆಯ ಬರೆ ಹಾಕಬಾರದು ಎಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಕೊರೋನಾ ಸೋಂಕು ತಗುಲಿದ ನಂತರ ಜನರು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಎಲ್ಲಾ ವಲಯಗಳು ನಷ್ಟದ ಸುಳಿಗೆ ಸಿಲುಕಿವೆ. ಜನತೆ ಉದ್ಯೋಗ, ವೇತನ ಇಲ್ಲದೆ ಕಂಗಾಲಾಗಿದ್ದಾರೆ. ವಿದ್ಯುತ್ ದರ ಏರಿಕೆಯನ್ನು ಮುಂದೂಡುವುದು ಒಳಿತು ಎಂದು ಟ್ವೀಟ್ ಮಾಡಿದ್ದಾರೆ.

ADVERTISEMENT

ಪ್ರತಿ ಯೂನಿಟ್ಗೆ 20 ಪೈಸೆಯಿಂದ 50 ಪೈಸೆ ವರೆಗೆ, ಸರಾಸರಿ 40 ಪೈಸೆ ಹೆಚ್ಚಳ ಮಾಡಿರುವುದು ಜನರಿಗೆ ಮತ್ತಷ್ಟು ಹೊರೆಯಾಗಲಿದ್ದು ಕೂಡಲೇ ಸರ್ಕಾರ ತಮ್ಮ ನಿರ್ಧಾರವನ್ನು ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.