ADVERTISEMENT

ಬರ ಪಟ್ಟಿಗೆ ಇನ್ನಷ್ಟು ತಾಲ್ಲೂಕು: ಹೆಚ್ಚುವರಿಯಾಗಿ ತಲಾ ₹ 50 ಲಕ್ಷ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 19 ಡಿಸೆಂಬರ್ 2018, 19:35 IST
Last Updated 19 ಡಿಸೆಂಬರ್ 2018, 19:35 IST
   

ಬೆಳಗಾವಿ: ಹಿಂಗಾರು ಮಳೆ ಕೊರತೆ ಆಧರಿಸಿ, ಡಿಸೆಂಬರ್‌ ಅಂತ್ಯದೊಳಗೆ ಇನ್ನಷ್ಟು ತಾಲ್ಲೂಕುಗಳನ್ನು ಬರಪೀಡಿತವೆಂದು ಘೋಷಿಸಲಾಗುವುದು ಎಂದು ಕಂದಾಯ ಸಚಿವ ಆರ್‌.ವಿ. ದೇಶಪಾಂಡೆ ತಿಳಿಸಿದರು.

ಬರ ಪರಿಸ್ಥಿತಿ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಗೆ ಬುಧವಾರ ಉತ್ತರ ನೀಡಿದ ಅವರು, ‘ಬರ ಪರಿಹಾರಕ್ಕೆ ಹಣದ ಕೊರತೆ ಇಲ್ಲ. ಉದ್ಯೋಗ ಅರಸಿ ಗುಳೆ ಹೋಗಲು ಬಿಡುವುದಿಲ್ಲ. ಕುಡಿಯುವ ನೀರಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಜಾನು
ವಾರುಗಳಿಗೆ ಅಗತ್ಯವಿರುವ ಗೋ ಶಾಲೆ ಮತ್ತು ಮೇವು ಬ್ಯಾಂಕುಗಳನ್ನು ತೆರೆಯಲಾಗುವುದು’ ’ ಎಂದು ಭರವಸೆ ನೀಡಿದರು.

ಸತತ ಬರ ಪರಿಸ್ಥಿತಿ ಕುರಿತು ಅಧ್ಯಯನ ನಡೆಸಲು, ಪರಿಸ್ಥಿತಿ ಎದುರಿಸುವ ಜೊತೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ತಜ್ಞರ ಸಮಿತಿ ರಚಿಸಲಾಗುವುದು ಎಂದು ದೇಶಪಾಂಡೆ ಹೇಳಿದರು.

ADVERTISEMENT

ಬರ ಪೀಡಿತ ತಾಲ್ಲೂಕುಗಳಿಗೆ ಈವರೆಗೆ ₹ 50 ಲಕ್ಷ ನೀಡಲಾಗಿದೆ. ಹೆಚ್ಚುವರಿ ಹಣ ಬಿಡುಗಡೆಗೂ ಆದೇಶ ಹೊರಡಿಸಲಾಗಿದೆ. ಮೇವಿಗೆ ಒಟ್ಟು ₹ 10 ಕೋಟಿ ಒದಗಿಸಲಾಗಿದೆ.ನೆರೆ ರಾಜ್ಯಗಳಿಗೆ ಮೇವು ಸಾಗಣೆ ನಿಷೇಧಿಸಲಾಗಿದೆ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.