ADVERTISEMENT

ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ಸರ್ಕಾರಕ್ಕೆ ಮುಖಭಂಗ: ಸುರ್ಜೇವಾಲ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2024, 10:18 IST
Last Updated 22 ಏಪ್ರಿಲ್ 2024, 10:18 IST
ರಣದೀಪ್ ಸಿಂಗ್ ಸುರ್ಜೇವಾಲ
ರಣದೀಪ್ ಸಿಂಗ್ ಸುರ್ಜೇವಾಲ   

ಬೆಂಗಳೂರು: ರಾಜ್ಯಕ್ಕೆ ಬರಬೇಕಾಗಿದ್ದ ₹ 18,172 ಕೋಟಿ ಬರ ಪರಿಹಾರ ತಡೆಯಲು ಷಡ್ಯಂತ್ರ ನಡೆಸಿದ ಮೋದಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಇಂದು ಮುಖಭಂಗವಾಗಿದೆ ಎಂದು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ಹೇಳಿದ್ದಾರೆ.

ಕರ್ನಾಟಕ್ಕಕೆ ಬರ ಪರಿಹಾರ ಬಿಡುಗಡೆ ಮಾಡಲು ಚುನಾವಣಾ ಆಯೋಗ ಒಪ್ಪಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದನ್ನು ಉಲ್ಲೇಖಸಿ ಅವರು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ' ಇಂದು ನಮ್ಮ ರಾಜ್ಯದ ರೈತರಿಗೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್‌ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ರೈತಪರ ಹೋರಾಟಕ್ಕೆ ಜಯ ಸಿಕ್ಕಿದೆ' ಎಂದಿದ್ದಾರೆ.

ADVERTISEMENT

'ಬರ ಪರಿಹಾರ ವಿಚಾರವಾಗಿ ನ್ಯಾಯಾಲಯದ ಮೊರೆ ಹೋಗಿದ್ದ ಕರ್ನಾಟಕ ರಾಜ್ಯ ಸರ್ಕಾರಕ್ಕೆ ಜಯ ಸಿಕ್ಕಿದ್ದು, ಈ ಮೂಲಕ ಪ್ರಧಾನಮಂತ್ರಿಗಳು ಗೃಹಮಂತ್ರಿಗಳ ರೈತ ವಿರೋಧಿ ನಿಲುವಿಗೆ ನ್ಯಾಯಾಲಯವು ತಕ್ಕ ಪಾಠ ಕಲಿಸಿದೆ. ಪ್ರಧಾನಮಂತ್ರಿಗಳು ಹಾಗೂ ಗೃಹ ಮಂತ್ರಿಗಳು ಮೊದಲು ಒಕ್ಕೂಟ ವ್ಯವಸ್ಥೆಯನ್ನು ಗೌರವಿಸುವುದನ್ನು ಕಲಿಯಬೇಕು' ಎಂದಿದ್ದಾರೆ.

‘ಕನ್ನಡಿಗರು ಕೇಂದ್ರ ಸರ್ಕಾರದ ಮಲತಾಯಿ ಧೋರಣೆಯನ್ನು ಎಂದಿಗೂ ಸಹಿಸುವುದಿಲ್ಲ. ಕಾಂಗ್ರೆಸ್ ಪಕ್ಷವು ಹಿಂದೆ, ಮುಂದೆ, ಎಂದೆಂದೂ ಕೂಡ ಕನ್ನಡಿಗರ ಹಾಗೂ ರಾಜ್ಯದ ರಕ್ಷಣೆಗಾಗಿ ಸದಾ ಬದ್ದರಾಗಿದ್ದು ಮುಂದೆಯೂ ಸಹ ನೆಲ ಜಲದ ವಿಚಾರಗಳಲ್ಲಿ ರಾಜಿಯಾಗುವುದಿಲ್ಲ. ಸತ್ಯಮೇವ ಜಯತೆ‘ ಎಂದು ಸುರ್ಜೇವಾಲ ಪೋಸ್ಟ್‌ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.