ಚಿತ್ರದುರ್ಗ: ‘ಡ್ರಗ್ಸ್ ದಂಧೆಯ ತನಿಖೆ ಸಮರ್ಥವಾಗಿ ನಡೆಯುತ್ತಿದೆ. ಅದರ ವರದಿಯನ್ನು ರಾಜ್ಯ ಸರ್ಕಾರ ಸೋರಿಕೆ ಮಾಡುತ್ತಿಲ್ಲ. ಆದರೆ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾದಿ ತಪ್ಪಿಸುವ ಉದ್ದೇಶದಿಂದ ಸರ್ಕಾರದ ಮೇಲೆ ಆರೋಪ ಮಾಡುತ್ತಿದ್ದಾರೆ’ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಪ್ರತಿಕ್ರಿಯಿಸಿದರು.
ಹೊರವಲಯದ ಮಾದಾರ ಚನ್ನಯ್ಯ ಗುರುಪೀಠಕ್ಕೆ ಶನಿವಾರ ರಾತ್ರಿ ಭೇಟಿ ನೀಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಡ್ರಗ್ಸ್ ಮಾಫಿಯಾದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಕಾನೂನಾತ್ಮಕವಾಗಿ ಶಿಕ್ಷೆ ಆಗಲಿದೆ. ತಪ್ಪಿತಸ್ಥರನ್ನು ಸರ್ಕಾರ ಬಚಾವ್ ಮಾಡುವುದಿಲ್ಲ’ ಎಂದು ತಿರುಗೇಟು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.