ಬೆಂಗಳೂರು: ಡ್ರಗ್ಸ್ ಜಾಲದ ತನಿಖೆ ನಡೆಸುತ್ತಿರುವ ಸಿಸಿಬಿ, ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈಗೆ ನೋಟಿಸ್ ನೀಡಿದೆ.
ಪ್ರಕರಣದ ಬಗ್ಗೆ ಮಾಹಿತಿ ಕಲೆಹಾಕಬೇಕಿದೆ. ಹೀಗಾಗಿ ಸೆ. 16ರಂದು ಬೆಳಿಗ್ಗೆ 11ಕ್ಕೆ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಬನ್ನಿ ಎಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.
'ನಟ ದಿಗಂತ್ ಹಾಗೂ ನಟಿ ಐಂದ್ರಿತಾ ರೈ ಅವರಿಗೆ ನೋಟಿಸ್ ನೀಡಲಾಗಿದೆ. ಅವರು ಬಂದ ನಂತರ ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು' ಎಂದು ಸಿಸಿಬಿಯ ಜಂಟಿ ಕಮಿಷನರ್ ಸಂದೀಪ್ ಪಾಟೀಲ ತಿಳಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.