ADVERTISEMENT

ಡ್ರಗ್ಸ್‌ನಂತೆ ಬ್ಲೂ ಫಿಲಂ ಕೂಡಾ ವ್ಯಸನವೇ: ಸವದಿ ಬಗ್ಗೆ ಸಾ.ರಾ. ಮಹೇಶ್‌ ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 11 ಸೆಪ್ಟೆಂಬರ್ 2020, 6:49 IST
Last Updated 11 ಸೆಪ್ಟೆಂಬರ್ 2020, 6:49 IST
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಮಾಜಿ ಸಚಿವ ಸಾ.ರಾ.ಮಹೇಶ್‌
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಮತ್ತು ಮಾಜಿ ಸಚಿವ ಸಾ.ರಾ.ಮಹೇಶ್‌   

ಬೆಂಗಳೂರು: ಅಸಲಿಗೆ ಎಲ್ಲವೂ ವ್ಯವಸನವೇ ಡ್ರಗ್ಸ್‌ ಆದರೂ, ಬ್ಲೂ ಫಿಲಂ ಆದರೂ... ಹೀಗೆಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಬಗ್ಗೆ ಜೆಡಿಎಸ್‌ ಮುಖಂಡ, ಮಾಜಿ ಸಚಿವ ಸಾ.ರಾ.ಮಹೇಶ್‌ ವ್ಯಂಗ್ಯವಾಡಿದ್ದಾರೆ.

‘ಜೆಡಿಎಸ್‌–ಕಾಂಗ್ರೆಸ್‌ ಸಮ್ಮಿಶ್ರ ಸರ್ಕಾರವನ್ನು ಉರುಳಿಸಿದ್ದೇ ಡ್ರಗ್ಸ್‌ ದಂಧೆಕೋರರು ಎಂಬ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿಕೆ ನೋಡಿ ನಗು ಬಂತು. ಅವರ ಮಾತು, ಕುಣಿಯಲು ಬರದವರು ನೆಲ ಡೊಂಕು ಎನ್ನುವಂತಿದೆ’ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಗುರುವಾರ ಟೀಕಿಸಿದ್ದರು.

ಈ ಬಗ್ಗೆ ಟ್ವೀಟ್‌ ಮಾಡಿರುವ ಜೆಡಿಎಸ್‌ ಮುಖಂಡ ಸಾ.ರಾ.ಮಹೇಶ್‌, 'ಡ್ರಗ್ಸ್‌ ದಂದೆಕೋರರೇ ಸರ್ಕಾರ ಬೀಳಿಸಿದರು ಎಂಬ ಮಾಜಿ ಸಿಎಂ ಎಚ್‌ಡಿಕೆ ಅವರ ಆರೋಪ ಡಿಸಿಎಂ ಲಕ್ಷ್ಮಣ ಸವದಿ ಅವರಿಗೆ ನಗು ತರಿಸಿತ್ತಂತೆ. ಬ್ಲೂ ಫಿಲಂ ನೋಡುವ ಅಡಿಕ್ಷನ್‌ (ವ್ಯಸನ) ಇರುವವರು ಈ ರಾಜ್ಯದ ಡಿಸಿಎಂ ಆಗುತ್ತಿದ್ದಾರೆ ಎಂದಾಗ ರಾಜ್ಯದ ಜನರಿಗೇ ನಗು, ದುಃಖ ಬಂದಿತ್ತು. ಅಸಲಿಗೆ ಎಲ್ಲವೂ ವ್ಯವಸನವೇ ಡ್ರಗ್ಸ್‌ ಆದರೂ, ಬ್ಲೂ ಫಿಲ್ಮಂ ಆದರೂ...' ಎಂದು ವ್ಯಂಗ್ಯವಾಡಿದ್ದಾರೆ.

ADVERTISEMENT

2012ರಲ್ಲಿ ಸದನ ನಡೆಯುತ್ತಿರುವಾಗಲೇ ಬ್ಲೂ ಫಿಲಂ ನೋಡಿದ ಆರೋಪ ಲಕ್ಷ್ಮಣ ಸವದಿ ಅವರ ಮೇಲೆ ಕೇಳಿ ಬಂದಿತ್ತು. ಇದೇ ಕಾರಣಕ್ಕೆ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.