ADVERTISEMENT

ರಾಜ್ಯದಲ್ಲಿ ಒಣಹವೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 11 ಮಾರ್ಚ್ 2023, 19:45 IST
Last Updated 11 ಮಾರ್ಚ್ 2023, 19:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದ್ದು, ಶನಿವಾರ ಪಣಂಬೂರಿನಲ್ಲಿ ಗರಿಷ್ಠ ಉಷ್ಣಾಂಶ 39.6 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು.

ಮುಂದಿನ 24 ಗಂಟೆಯಲ್ಲಿ ಕೆಲವು ಕಡೆ ಬಿಸಿ ಗಾಳಿ ಬೀಸುವ ಸಾಧ್ಯತೆಯಿದ್ದು, ಇದರಿಂದ ತಾಪಮಾನ ಮತ್ತಷ್ಟು ಏರಿಕೆ ಕಾಣಿಸಲಿದೆ. ಕರಾವಳಿ ಭಾಗದಲ್ಲಿ ಸಾಮಾನ್ಯಕ್ಕಿಂತ 4ರಿಂದ 5 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ಹೆಚ್ಚಾಗುವ ಸಾಧ್ಯತೆ ಇದೆ. ಒಳನಾಡಿನ ಕೆಲವು ಭಾಗದಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇಳಿಕೆ ಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರಿನಲ್ಲಿ ಬಲವಾದ ಮೇಲ್ಮೈ ಗಾಳಿ ಬೀಸಲಿದೆ. ಗರಿಷ್ಠ 32 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ 17 ಡಿಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.