ADVERTISEMENT

ದಲಿತರ ಸಾಂಸ್ಕೃತಿಕ ಪ್ರತಿರೋಧ ಇಂದು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 19:21 IST
Last Updated 5 ಡಿಸೆಂಬರ್ 2022, 19:21 IST
ರಮಾಬಾಯಿ ಆನಂದ್ ತೇಲ್ತುಂಬ್ಡೆ
ರಮಾಬಾಯಿ ಆನಂದ್ ತೇಲ್ತುಂಬ್ಡೆ   

ಬೆಂಗಳೂರು: ‘ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ದಲಿತರ ಸಾಂಸ್ಕೃತಿಕ ಪ್ರತಿರೋಧದ’ ಹೆಸರಿನಲ್ಲಿ ದಲಿತ ಸಂಘಟನೆಗಳ ಐಕ್ಯತಾ ಸಮಾವೇಶ ನಗರದ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಮಂಗಳವಾರ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ರಂಗ ನಿರ್ದೇಶಕ ಸಿ.ಬಸವಲಿಂಗಯ್ಯ ಅವರು ಬೆಳಿಗ್ಗೆ 10ಕ್ಕೆ ಚಾಲನೆ ನೀಡುವರು. ಮಧ್ಯಾಹ್ನ 12.30ಕ್ಕೆ ಆರಂಭವಾಗುವ ಸಮಾವೇಶವನ್ನು ಅಂಬೇಡ್ಕರ್ ಅವರ ಮೊಮ್ಮಗಳು ರಮಾಬಾಯಿ ಆನಂದ್ ತೇಲ್ತುಂಬ್ಡೆ ಉದ್ಘಾಟಿಸುವರು. ದಲಿತ ಹೋರಾಟಗಾರ ಎನ್.ವೆಂಕಟೇಶ್ ಅಧ್ಯಕ್ಷತೆ ವಹಿಸುವರು. ಇಂದೂಧರ ಹೊನ್ನಾಪುರ ಪ್ರಸ್ತಾವಿಕವಾಗಿ ಮಾತನಾಡುವರು. ಹೈಕೋರ್ಟ್‌ ನಿವೃತ್ತ ನ್ಯಾಯಮೂರ್ತಿ ಎಚ್‌.ಎನ್.ನಾಗಮೋಹನದಾಸ್, ವಕೀಲ ರವಿವರ್ಮಕುಮಾರ್ ಪ್ರಧಾನ ಭಾಷಣ ಮಾಡುವರು.

ದಲಿತ ಹೋರಾಟಗಾರಾದ ಎಸ್.ಮರಿಸ್ವಾಮಿ, ಮಾವಳ್ಳಿ ಶಂಕರ್, ಗುರುಪ್ರಸಾದ್ ಕೆರಗೋಡು, ವಿ.ನಾಗರಾಜ್, ಡಿ.ಜಿ.ಸಾಗರ್, ಲಕ್ಷ್ಮಿನಾರಾಯಣ ನಾಗವಾರ, ಅಣ್ಣಯ್ಯ, ಅರ್ಜುನ್ ಭದ್ರೆ, ಎನ್‌.ಮುನಿಸ್ವಾಮಿ, ಎಂ.ಸೋಮಶೇಖರ್, ಜಿಗಣಿ ಶಂಕರ್, ಎಸ್.ಆರ್.ಕೊಲ್ಲೂರು, ಕೆ.ದೊರೈರಾಜ್, ಕೆ.ಗಂಗಮ್ಮ ತುಮಕೂರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.