ADVERTISEMENT

ಡಿವೈಎಸ್‌ಪಿ ಲಕ್ಷ್ಮಿ ಪ್ರಕರಣ | ಸತ್ಯಾಸತ್ಯತೆ ಅರಿಯಲು ತನಿಖೆಗೆ ಸೂಚನೆ: ಬೊಮ್ಮಾಯಿ

​ಪ್ರಜಾವಾಣಿ ವಾರ್ತೆ
Published 17 ಡಿಸೆಂಬರ್ 2020, 10:58 IST
Last Updated 17 ಡಿಸೆಂಬರ್ 2020, 10:58 IST
ಬಸವರಾಜ ಬೊಮ್ಮಾಯಿ, ಗೃಹ ಸಚಿವ
ಬಸವರಾಜ ಬೊಮ್ಮಾಯಿ, ಗೃಹ ಸಚಿವ   

ಹಾವೇರಿ: ‘ಸಿಐಡಿ ವಿಭಾಗದ ಡಿವೈಎಸ್ಪಿ ಲಕ್ಷ್ಮಿ ಸಾವಿನ ಪ್ರಕರಣದ ಸತ್ಯಾಸತ್ಯತೆ ಅರಿಯಲು ತನಿಖೆ ನಡೆಸಿ ಎಂದು ಪೊಲೀಸ್‌ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಪೊಲೀಸ್ ಇಲಾಖೆಯ ಸಿಬ್ಬಂದಿಗೆ ಮನೋಸ್ಥೈರ್ಯ ತುಂಬಲು ನಿರಂತರವಾಗಿ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ’ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ಪೊಲೀಸ್‌ ಸಿಬ್ಬಂದಿಗೆ ವೈಯಕ್ತಿಕ ಸಮಸ್ಯೆಗಳಿದ್ದರೂ ಬಗೆಹರಿಸಲು ಇಲಾಖೆಯಿಂದ ನೆರವು ನೀಡಲಾಗುವುದು ಎಂದರು.

ಸಿ.ಎಂ. ಹೇಳಿದ ದಿನ ಮಂತ್ರಿಯಾಗ್ತೀನಿ:‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಯಾವತ್ತು ಹೇಳ್ತಾರೋ ಅಂದು ಮಂತ್ರಿಯಾಗ್ತೀನಿ. ರಾಜ್ಯ ಘಟಕದ ಅಧ್ಯಕ್ಷ ನಳೀನ್‌ಕುಮಾರ್‌ ಕಟೀಲ್‌ ಕೂಡ ಮಂತ್ರಿ ಮಾಡುವ ಭರವಸೆ ನೀಡಿದ್ದಾರೆ. ಒಳ್ಳೆಯ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂಬ ಭರವಸೆ ಇದೆ’ ಎಂದು ವಿಧಾನ ಪರಿಷತ್‌ ಸದಸ್ಯ ಆರ್‌.ಶಂಕರ್ ಮಾಧ್ಯಮದವರ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.