ADVERTISEMENT

ಸ್ಥಳೀಯ ಸಂಸ್ಥೆ ಸ್ವತ್ತು: ಇ–ಆಸ್ತಿ ತಂತ್ರಾಂಶಕ್ಕೆ ಅನುಮೋದನೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2022, 22:00 IST
Last Updated 22 ಡಿಸೆಂಬರ್ 2022, 22:00 IST
   

ಬೆಳಗಾವಿ: 2017ಕ್ಕೂ ಮುನ್ನ ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯಿಂದ ಹೊರಗಿದ್ದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿಗಳ ಖಾತೆಗಳನ್ನು ಇ–ಆಸ್ತಿ ತಂತ್ರಾಂಶದಲ್ಲಿ ದಾಖಲಿಸಿ, ‘ಇ–ಖಾತೆ’ ನೀಡಲು ಸರ್ಕಾರಿ ನಿರ್ಧರಿಸಿದೆ.

ಗುರುವಾರ ಇಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಲಾಗಿದೆ.

ಅಲ್ಲದೇ, ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ
ಮೇಲ್ದರ್ಜೆಗೇರಿಸಿದ ನಂತರ ಅವುಗಳ ಇ–ಸ್ವತ್ತು ತಂತ್ರಾಂಶದಡಿಯಲ್ಲಿ ನಿರ್ವಹಿಸಿದ ಖಾತೆಗಳನ್ನು ಇ–ಆಸ್ತಿ ತಂತ್ರಾಂಶದಲ್ಲಿ ದಾಖಲಿಸಲು ಅವಕಾಶ ನೀಡಲು ಸಂಪುಟದಲ್ಲಿ ನಿರ್ಣಯಿಸಲಾಯಿತು.

ADVERTISEMENT

ಇದರಿಂದ ರಾಜ್ಯದ ಒಟ್ಟು 302 ನಗರ ಸ್ಥಳೀಯ ಸಂಸ್ಥೆಗಳ ಪೈಕಿ 175 ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ–ಖಾತೆ ನೀಡಿಕೆಗೆ ಇದ್ದ ಅಡೆ–ತಡೆಗಳು ಬಗೆಹರಿಯಲಿವೆ. ಉಳಿದ ನಗರ ಸ್ಥಳೀಯ ಸಂಸ್ಥೆಗಳು ಯೋಜನಾ ಪ್ರಾಧಿಕಾರಿಗಳ ವ್ಯಾಪ್ತಿಯಲ್ಲಿನ ಇ–ಖಾತೆ ಸಮಸ್ಯೆಗಳು ಬಗೆಹರಿಯಲು ಸುಪ್ರೀಂಕೋರ್ಟ್‌ ನೀಡಿರುವ ತಡೆಯಾಜ್ಞೆ ತೆರವುಗೊಳ್ಳುವವರೆಗೆ ಕಾಯಬೇಕಾಗುತ್ತದೆ ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.