ಬೆಂಗಳೂರು: ಗ್ರಾಮಪಂಚಾಯಿತಿಗಳ ವ್ಯಾಪ್ತಿಯಲ್ಲಿ ಇ–ಸ್ವತ್ತು ಜಾರಿಗೆ ತರಲು ನಿಯಮಗಳ ಕರಡನ್ನು ಒಂದು ವಾರದೊಳಗೆ ಪ್ರಕಟಿಸಬೇಕು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಈ ಕುರಿತು ವಿಕಾಸಸೌಧದಲ್ಲಿ ಅಧಿಕಾರಿಗಳ ಜತೆ ಸಭೆ ನಡೆಸಿದ ಅವರು ಕರಡು ನಿಯಮಗಳಲ್ಲಿ ಕೆಲವು ಬದಲಾವಣೆಗಳನ್ನೂ ಸೂಚಿಸಿದರು.
ತೆರಿಗೆ ದರ, ಶುಲ್ಕಗಳನ್ನು ವಿಧಿಸುವ ಪ್ರಕ್ರಿಯೆ, ಕಟ್ಟಡಗಳು ಮತ್ತು ಭೂಮಿಯ ಮೇಲೆ ತೆರಿಗೆ ವಿಧಿಸುವುದು, ನಮೂನೆ 11 ಎ ನಿರ್ವಹಣೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ನಿಯಮ, 2025 ರ ನಂತರ ನಮೂನೆ 11 ಎ ರಿಜಿಸ್ಟರ್‌ಗೆ ಹೊಸ ಆಸ್ತಿಗಳ ಸೇರ್ಪಡೆ, ಮೇಲ್ಮನವಿ, ದಂಡನೆಗಳು, ನೀರು ಸರಬರಾಜು ದರ ಮತ್ತು ಇತರ ದರಗಳ ನಿರ್ಧರಣೆ, ದಂಡ ನಿರ್ಧಾರ, ಸ್ಥಿರ ಸ್ವತ್ತಿನ ಪರಿಶೀಲನೆ, ಮೇಲ್ಮನವಿ, ತಗಾದೆ ನೋಟಿಸ್, ಜಪ್ತಿ ಮತ್ತು ಮಾರಾಟ ಮುಂತಾದ ವಿಷಯಗಳ ಕುರಿತು ಪ್ರಿಯಾಂಕ್ ಚರ್ಚಿಸಿದರು.
ಇ–ಸ್ವತ್ತು ರೂಪಿಸುವ ಸಂಬಂಧ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್ ಹಲವು ಸಲಹೆಗಳನ್ನು ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.