ಪ್ರಿಯಾಂಕ್ ಖರ್ಗೆ
ಬೆಂಗಳೂರು: ಇ–ಸ್ವತ್ತು ತಂತ್ರಾಂಶ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರಿದಿದ್ದು, ಮಂಗಳವಾರವೂ ಇ–ಸ್ವತ್ತು ತಂತ್ರಾಂಶವು ಕಾರ್ಯ ನಿರ್ವಹಿಸುವುದಿಲ್ಲ ಎಂದು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಆಗಿರುವ ತೊಂದರೆ ಕಡಿಮೆ ಮಾಡಲು ಹೊಸ ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ–ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು ಆಗಸ್ಟ್ 2 ರವರೆಗೆ ಪ್ರತಿನಿತ್ಯ ರಾತ್ರಿ 8 ಗಂಟೆಯವರೆಗೆ ವಿಸ್ತರಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.