
ಪ್ರಜಾವಾಣಿ ವಾರ್ತೆ
ನವದೆಹಲಿ: ಪೂರ್ವ ಪ್ರಾಥಮಿಕ ಕಲಿಕೆ ಸೇರಿದಂತೆ ಆರಂಭಿಕ ಬಾಲ್ಯದ ಆರೈಕೆ ಮತ್ತು ಶಿಕ್ಷಣವನ್ನು ಮೂಲಭೂತ ಹಕ್ಕನ್ನಾಗಿ ಮಾಡಬೇಕೆಂದು ಕೋರಿ ರಾಜ್ಯಸಭಾ ಸದಸ್ಯೆ ಸುಧಾಮೂರ್ತಿ ಅವರು ರಾಜ್ಯಸಭೆಯಲ್ಲಿ ಶುಕ್ರವಾರ ನಿರ್ಣಯ ಮಂಡಿಸಿದ್ದಾರೆ.
ಸಂವಿಧಾನದಲ್ಲಿ ಹೊಸ ವಿಧಿ 21 ಬಿ ಸೇರಿಸಿ 3ರಿಂದ 6 ವರ್ಷದ ಮಕ್ಕಳಿಗೆ ಉಚಿತ ಮತ್ತು ಕಡ್ಡಾಯವಾಗಿ ಶೈಶವಾವಸ್ಥೆಯ ಸಮಯದಲ್ಲಿ ಆರೈಕೆ, ಆರೋಗ್ಯ ಹಾಗೂ ಶಿಕ್ಷಣ ಕೊಡಬೇಕೆಂದು ನಿರ್ಣಯದಲ್ಲಿ ತಿಳಿಸಿದ್ದಾರೆ.
ದೇಶದ ಎಲ್ಲ ಮಕ್ಕಳಿಗೂ ಉತ್ತಮ ಗುಣಮಟ್ಟದ ಆರೈಕೆ ದೊರಕುವಂತೆ ಮಾಡಲು ಅಂಗನವಾಡಿಗಳನ್ನು ಬಲಪಡಿಸಬೇಕು. ಎಲ್ಲ ಮಕ್ಕಳಿಗೂ ಸಮಾನ ಆರೈಕೆ ಮತ್ತು ಕಲಿಕೆ ಅವಕಾಶ ದೊರಕುವಂತೆ ನೋಡಿಕೊಳ್ಳಬೇಕು. ಇದಕ್ಕೆ ಸಂಬಂಧಿಸಿದ ಶಿಕ್ಷಕರು, ಕಾರ್ಯಕರ್ತರಿಗೆ ತರಬೇತಿ, ಗುಣಮಟ್ಟದ ಸೌಲಭ್ಯ ಒದಗಿಸಬೇಕು ಎಂದೂ ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.