ADVERTISEMENT

ಹೊಸದುರ್ಗ: ಭೂಮಿ ಕಂಪಿಸಿದ ಅನುಭವ

​ಪ್ರಜಾವಾಣಿ ವಾರ್ತೆ
Published 13 ನವೆಂಬರ್ 2018, 7:28 IST
Last Updated 13 ನವೆಂಬರ್ 2018, 7:28 IST
ಗಾಬರಿಗೊಂಡು ಮನೆಯಿಂದ ಹೊರಗೆ ಓಡಿ ಬಂದಿರುವ ಗ್ರಾಮಸ್ಥರು
ಗಾಬರಿಗೊಂಡು ಮನೆಯಿಂದ ಹೊರಗೆ ಓಡಿ ಬಂದಿರುವ ಗ್ರಾಮಸ್ಥರು   

ಚಿತ್ರದುರ್ಗ: ಹೊಸದುರ್ಗ ತಾಲ್ಲೂಕಿನ ಕಂಚೀಪುರ ಹಾಗೂ ಗುಡ್ಡದನೇರಳೆಕೆರೆ ಗ್ರಾಮಗಳಲ್ಲಿ ಮಂಗಳವಾರ ಭೂಮಿ ಕಂಪಿಸಿದ ಅನುಭವವಾಗಿದೆ.

ಮಂಗಳವಾರ ಬೆಳಿಗ್ಗೆ 10.30ರ ಸುಮಾರಿಗೆ ಭಾರಿ ಶಬ್ದ ಕೇಳಿಸಿದೆ. ಬಳಿಕ ಒಂದು ಸೆಕೆಂಡ್ ಕಾಲ ಭೂಮಿ ಕಂಪಿಸಿದ ಅನುಭವ ಅಗಿದ್ದರಿಂದ,ಗಾಬರಿಗೊಂಡ ಗ್ರಾಮಸ್ಥರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ.

ಈ ಕುರಿತು ಕಂಚೀಪುರ ಗ್ರಾಮಸ್ಥರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಎರಡು ವರ್ಷಗಳ ಹಿಂದೆಕಂಚೀಪುರ ವ್ಯಾಪ್ತಿಯಲ್ಲಿ ಭೂಮಿ ಕಂಪಿಸಿತ್ತು.

ADVERTISEMENT

ಗುಡ್ಡದನೇರಲಕೆರೆ, ತಾರೀಕೆರೆ, ಸಿದ್ದಾಪುರ, ಕ್ರುಶ್ಣಪುರ, ಕಸಪ್ಪನ ಹಳ್ಳಿ ಸೇರಿ ಇನ್ನಿತರ ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ.ಅಕ್ರಮ ಗಣಿಗಾರಿಕೆ, ಮರಳು ದಂಧೆ, ಕಲ್ಲು ಗಣಿಗಾರಿಕೆ, ಅರಣ್ಯ ಭೂಮಿ ಅತಿಕ್ರಮದಿಂದ ಭೂಕಂಪವಾಗಿದೆ ಎಂಬುದು ಜನರ ಆರೋಪ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂಕಂಪವನ್ನು ದೃಢಪಡಿಸಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.