ADVERTISEMENT

ಆರ್ಥಿಕ ಗಣತಿ ಕಾರ್ಯಕ್ಕೆ ಚಾಲನೆ: ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್ ಬಳಕೆ

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2019, 19:40 IST
Last Updated 6 ನವೆಂಬರ್ 2019, 19:40 IST
   

ಬೆಂಗಳೂರು: ವಿವಿಧ ಆರ್ಥಿಕ ಚಟುವಟಿಕೆಗಳ ಗಣತಿ ಕಾರ್ಯಕ್ಕೆ ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು. ಇದೇ ಮೊದಲ ಬಾರಿಗೆ ಮೊಬೈಲ್ ಆ್ಯಪ್‌ನಲ್ಲಿ ಮಾಹಿತಿ ದಾಖಲಿಸಲಾಗುತ್ತಿದೆ.

ಯಡಿಯೂರಪ್ಪ ಅವರಿಂದ ಗಣತಿದಾರರು ಮಾಹಿತಿ ಸಂಗ್ರಹಿಸುವ ಮೂಲಕ ರಾಜ್ಯದಲ್ಲಿ ಗಣತಿ ಕಾರ್ಯ ಚಾಲನೆ ಪಡೆದುಕೊಂಡಿತು. ಮುಖ್ಯಮಂತ್ರಿ ಡಾಲರ್ಸ್ ಕಾಲೊನಿಯಮನೆಯ ವಿಳಾಸ ನೀಡಿದರು. ತಮ್ಮ ಮನೆಯಲ್ಲಿ ಯಾವುದೇ ಆರ್ಥಿಕ ಚಟುವಟಿಕೆ ನಡೆಯುತ್ತಿಲ್ಲ ಎಂಬ ವಿವರ ಕೊಟ್ಟರು.

ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿ ವಿವಿಧ ಆರ್ಥಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಉದ್ಯಮಿಗಳ ಪಟ್ಟಿಮಾಡುವುದು, ಉದ್ಯಮದ ಕ್ಷೇತ್ರದಲ್ಲಿರುವ ಕಾರ್ಮಿಕರ ವಿವರ ಸಂಗ್ರಹಿಸುವುದು ಗಣತಿಯ ಮೂಲ ಉದ್ದೇಶವಾಗಿದೆ.

ADVERTISEMENT

‘ಗಣತಿದಾರರು ಮನೆಗೆ ಬಂದ ಸಮಯದಲ್ಲಿ ಸರಿಯಾದ ಮಾಹಿತಿ ನೀಡಬೇಕು. ಸಂಗ್ರಹಿಸಿದ ಮಾಹಿತಿಯನ್ನು ಕ್ರೋಡೀಕರಿಸಲಾಗುತ್ತದೆ. ಇದರಿಂದ ಮುಂದಿನ ದಿನಗಳಲ್ಲಿ ಯೋಜನೆ ರೂಪಿಸಲು ಸರ್ಕಾರಕ್ಕೆ ಸಹಕಾರಿಯಾಗುತ್ತದೆ’ ಎಂದು ಯಡಿಯೂರಪ್ಪ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.