ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಬೆಂಗಳೂರು: ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಅವರನ್ನು ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಸಿಕ್ಕಿಂನ ಗ್ಯಾಂಗ್ಟಕ್‌ನಲ್ಲಿ ಶನಿವಾರ ಬಂಧಿಸಿದ್ದಾರೆ.
ಚಿತ್ರದುರ್ಗದ 6, ಬೆಂಗಳೂರಿನ 10, ಗೋವಾದ 5, ಹುಬ್ಬಳ್ಳಿ, ಮುಂಬೈ, ಜೋಧಪುರದ ತಲಾ ಒಂದು ಕಡೆ ಮತ್ತು ಸಿಕ್ಕಿಂನಲ್ಲಿ ಐದು ಕಡೆ ಇ.ಡಿ ಅಧಿಕಾರಿಗಳು ಶುಕ್ರವಾರ ದಾಳಿ ನಡೆಸಿದ್ದರು. ಈ ವೇಳೆ ₹ 1 ಕೋಟಿ ವಿದೇಶಿ ಕರೆನ್ಸಿ ಸೇರಿದಂತೆ ₹ 12 ಕೋಟಿ ನಗದು ಹಾಗೂ 10 ಕೆ.ಜಿ. ಬೆಳ್ಳಿ ಸೇರಿ ₹ 6 ಕೋಟಿ ಮೌಲ್ಯದ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.
ನಾಲ್ಕು ವಾಹನಗಳು, 17 ಬ್ಯಾಂಕ್ ಖಾತೆಗಳು, ಎರಡು ಬ್ಯಾಂಕ್ ಲಾಕರ್‌ಗಳನ್ನು ಜಪ್ತಿ ಮಾಡಲಾಗಿದೆ.
ಇ.ಡಿ. ಅಧಿಕಾರಿಗಳು ವೀರೇಂದ್ರ ಅವರನ್ನು ಗ್ಯಾಂಗ್ಟಕ್‌ನ ಜಿಲ್ಲಾ ಮ್ಯಾಜಿಸ್ಟ್ರೇಟ್ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ಈ ವೇಳೆ, ಪ್ರಕರಣ ದಾಖಲಾಗಿರುವ ಬೆಂಗಳೂರು ನಗರ ನ್ಯಾಯಾಲಯದ ಎದುರು ಹಾಜರುಪಡಿಸಲು ಮ್ಯಾಜಿಸ್ಟ್ರೇಟ್ ಅನುಮತಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.