ಬೆಂಗಳೂರು: ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ಹಣವನ್ನು ವರ್ಗಾಯಿಸಿ, ವಂಚಿಸಿದ ಪ್ರಕರಣದಲ್ಲಿ ಆರೋಪಿಗಳಾಗಿರುವ ವಿಜಯ ಬ್ಯಾಂಕ್‌ನ ಮಾಜಿ ಹಿರಿಯ ಪ್ರಬಂಧಕ ಬಿ.ವೈ. ಶ್ರೀನಿವಾಸ್ ಮತ್ತು ಇತರರ ₹ 1.30 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿದೆ.
ಆರೋಪಿಗಳು ಕರಕುಶಲ ಅಭಿವೃದ್ಧಿ ನಿಗಮದ ಹಣವನ್ನು ವಂಚಿಸಿರುವುದು ತನಿಖೆಯಲ್ಲಿ ಪತ್ತೆಯಾಗಿತ್ತು. ಆರೋಪಿಗಳಿಗೆ ಸಂಬಂಧಿಸಿದ ಜಮೀನು, ಕಟ್ಟಡ ಮತ್ತು ಬ್ಯಾಂಕ್ ಖಾತೆಗಳಲ್ಲಿದ್ದ ಹಣವನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ ಎಂದು ಜಾರಿ ನಿರ್ದೇಶನಾಲಯ ಗುರುವಾರ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.