ಬೆಂಗಳೂರು: ಧಾರವಾಡದ ಓರಿಯಂಟಲ್ ಇನ್ಶುರೆನ್ಸ್ ಕಂಪನಿಯ ಮಾಜಿ ಆಡಳಿತಾಧಿಕಾರಿ ಟಿ. ಪ್ರದೀಪ್ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ತನಿಖೆ ಆರಂಭಿಸಿದೆ.
ಅಧಿಕಾರ ದುರ್ಬಳಕೆ ಮಾಡಿಕೊಂಡು ₹5.03 ಕೋಟಿಯನ್ನು ಅಕ್ರಮವಾಗಿ ಮೂರನೇ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದರು ಎಂಬುದು ತನಿಖೆಯಿಂದ ದೃಢಪಟ್ಟಿದೆ ಎಂದು ಇ.ಡಿ ತಿಳಿಸಿದೆ.
2014ರಲ್ಲಿಸಿಬಿಐ ಮತ್ತು ಎಸಿಬಿ ದಾಖಲಿಸಿದ್ದ ಎಫ್‌ಐಆರ್ ಆಧರಿಸಿ ದೂರು ದಾಖಲಿಸಿಕೊಂಡ ಇ.ಡಿ ಅಧಿಕಾರಿಗಳು ತನಿಖೆ ನಡೆಸಿದ್ದಾರೆ. ಮೂರನೇ ವ್ಯಕ್ತಿಗಳಿಗೆ ವರ್ಗಾವಣೆ ಮಾಡಿದ್ದ ಹಣವನ್ನು ದೇಶದ ಹಲವು ಎಟಿಎಂಗಳಲ್ಲಿ ಪಾವತಿಸಿಕೊಳ್ಳಲಾಗಿದೆ ಎಂದು ಇ.ಡಿ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.