ADVERTISEMENT

ಬಳ್ಳಾರಿಯ ಜನಪ್ರತಿನಿಧಿಗಳ ಮನೆಗಳ‌ ಮೇಲೆ ಇ.ಡಿ ದಾಳಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 4:03 IST
Last Updated 11 ಜೂನ್ 2025, 4:03 IST
<div class="paragraphs"><p>ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನಿವಾಸ</p></div>

ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ನಿವಾಸ

   

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಜನಪ್ರತಿನಿಧಿಗಳ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ( ಇ.ಡಿ)ವು ಬುಧವಾರ ಬೆಳಗ್ಗೆ ದಾಳಿ ನಡೆಸಿದೆ.

ಸಂಸದ ಇ. ತುಕಾರಾಂ, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಕಂಪ್ಲಿ ಶಾಸಕ ಜೆ.ಎನ್ ಗಣೇಶ್, ಶಾಸಕ ಬಿ. ನಾಗೇಂದ್ರ ಅವರ ಆಪ್ತ ಗೋವರ್ಧನ್ ರೆಡ್ಡಿ ಸೇರಿದಂತೆ ಹಲವರಿಗೆ ಸಂಬಂಧಿಸಿದ ಸ್ಥಳಗಳ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ. ಇ.ಡಿ ಅಧಿಕಾರಿಗಳು ಪರಿಶೀಲನೆಯಲ್ಲಿ ತೊಡಗಿದ್ದಾರೆ.

ADVERTISEMENT

ದಾಳಿ ಸಂದರ್ಭದಲ್ಲಿ ಸಂಸದರು ಮತ್ತು ಶಾಸಕರು ತಮ್ಮ ನಿವಾಸಗಳಲ್ಲಿ ಇದ್ದರು ಎಂದು ಗೊತ್ತಾಗಿದೆ.

ಯಾವ ಪ್ರಕರಣದಲ್ಲಿ ಸಂಸದರು ಮತ್ತು ಶಾಸಕರ ಮನೆಗಳ ಮೇಲೆ ದಾಳಿ ನಡೆದಿದೆ ಎಂಬುದು ಖಚಿತವಾಗಿಲ್ಲ. ಆದರೆ, ನಾಗೇಂದ್ರ ಆಪ್ತ ಗೋವರ್ಧನ್ ರೆಡ್ಡಿ ಮನೆ ಮೇಲೆ ದಾಳಿ ನಡೆದಿರುವುದರಿಂದ ಇದು ವಾಲ್ಮೀಕಿ ನಿಗಮದ ಹಗರಣದ ತನಿಖೆಯ ಭಾಗವಾಗಿರಬಹುದು ಎಂದು ಹೇಳಲಾಗುತ್ತಿದೆ.

ವಾಲ್ಮೀಕಿ ನಿಗಮದ ಹಣವನ್ನು ಬಳ್ಳಾರಿ ಲೋಕಸಭಾ ಚುನಾವಣೆಯಲ್ಲಿ ಬಳಸಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.