ಬೆಂಗಳೂರು: ಬೆಂಗಳೂರಿನ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಮತ್ತದರ ನಿರ್ದೇಶಕರ ಮನೆಗಳನ್ನೂ ಒಳಗೊಂಡು ದಕ್ಷಿಣ ಭಾರತದ 40 ಕಡೆ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಬುಧವಾರ ಶೋಧ ಕಾರ್ಯ ನಡೆಸಿದ್ದಾರೆ.
ಕರ್ನಾಟಕದ ಬೆಂಗಳೂರು ಮತ್ತು ಮಂಡ್ಯ, ಚೆನ್ನೈ, ಆಂಧ್ರಪ್ರದೇಶ ಹಾಗೂ ತೆಲಂಗಾಣದ ಕೆಲ ಶಿಕ್ಷಣ ಸಂಸ್ಥೆಗಳ ಮೇಲೂ ದಾಳಿ ನಡೆದಿದೆ ಎಂದು ಮೂಲಗಳು ತಿಳಿಸಿವೆ.
ಶಿಕ್ಷಣ ಸಂಸ್ಥೆಗಳು ಹಾಗೂ ಅದಕ್ಕೆ ಸಂಬಂಧಿಸಿದವರ ಮನೆಗಳ ಮೇಲೂ ದಾಳಿ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.