ಬೆಂಗಳೂರು: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ, ಕಾಂಗ್ರೆಸ್ ನಾಯಕಿ ಕುಸುಮಾ ಹನುಮಂತರಾಯಪ್ಪ ಸಹೋದರ ಅನಿಲ್ ಗೌಡ ಅವರ ಮನೆ ಕಚೇರಿಗಳು ಸೇರಿ ರಾಜ್ಯದಾದ್ಯಂತ 24ಕ್ಕೂ ಹೆಚ್ಚು ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಹುಬ್ಬಳ್ಳಿ, ಬೆಳಗಾವಿಯ 24ಕ್ಕೂ ಹೆಚ್ಚು ಸ್ಥಳಗಳಲ್ಲಿ ದಾಳಿ ನಡೆದಿದ್ದು, ಶೋಧ ನಡೆಸುತ್ತಿದ್ದಾರೆ. 100ಕ್ಕೂ ಹೆಚ್ಚು ಅಧಿಕಾರಿಗಳು ಶೋಧ ಕಾರ್ಯದಲ್ಲಿ ಭಾಗಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ವೀರೇಂದ್ರ ಪಪ್ಪಿ ಅವರ ಕುಟುಂಬದವರು ನಡೆಸುತ್ತಿರುವ ಟೂರ್ಸ್ ಅಂಡ್ ಟ್ರಾವೆಲ್ಸ್ ಸಂಸ್ಥೆಗಳು, ಗೋವಾದಲ್ಲಿನ ಕ್ಯಾಸಿನೊ ಮತ್ತು ಕ್ಲಬ್‌ಗಳಲ್ಲೂ ದಾಳಿ ನಡೆದಿದೆ ಎಂದು ಮೂಲಗಳು ಮಾಹಿತಿ ನೀಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.