ADVERTISEMENT

ಕೂಡ್ಲಿಗಿ ಶಾಸಕ ಶ್ರೀನಿವಾಸ್ ಮನೆ ಮೇಲೆ ಇ.ಡಿ ದಾಳಿ

​ಪ್ರಜಾವಾಣಿ ವಾರ್ತೆ
Published 11 ಜೂನ್ 2025, 3:59 IST
Last Updated 11 ಜೂನ್ 2025, 3:59 IST
   

ಕೂಡ್ಲಿಗಿ (ವಿಜಯನಗರ ಜಿಲ್ಲೆ): ತಾಲ್ಲೂಕಿನ ನರಸಿಂಹಗಿರಿಯಲ್ಲಿರುವ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಮನೆಯ ಮೇಲೆ ಬುಧವಾರ ಬೆಳಿಗ್ಗೆ ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಇ.ಡಿ ತಂಡ ಬೆಳಿಗ್ಗೆ 5 ಗಂಟೆ ಸುಮಾರಿಗೆ ಮನೆಯೊಳಕ್ಕೆ ಪ್ರವೇಶ ಮಾಡಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಮನೆಯಲ್ಲಿ ಶಾಸಕರ ತಾಯಿ ಮಾತ್ರ ಇದ್ದು, ಒಳಗೆ ಯಾರನ್ನೂ ಬಿಡದೆ ಮನೆ ಸುತ್ತ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ.

ಮಂಗಳವಾರ ಇಡೀ ದಿನ ಕ್ಷೇತ್ರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿದ್ದ ಶಾಸಕರು ಸಂಜೆ ತುಮಕೂರು ಕಡೆ ಹೋಗಿದ್ದರು. ಬುಧವಾರ ಸಹ ಅವರು ಅಲ್ಲಿಯೇ ಇದ್ದಾರೆ. ಶಾಸಕರ ಮನೆ ಮೇಲೆ ಇ.ಡಿ ದಾಳಿ ಮಾಡಿರುವುದನ್ನು ಅವರ ಅಪ್ತರು ಖಚಿತಪಡಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.