ಇ.ಡಿ
ಬೆಂಗಳೂರು: ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ನಡೆಸುತ್ತಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ (ಪಪ್ಪಿ) ಅವರ ಚಳ್ಳಕೆರೆ ಮನೆಯಲ್ಲಿ ಇ.ಡಿ ಅಧಿಕಾರಿಗಳು ಮಂಗಳವಾರ ಶೋಧ ನಡೆಸಿದ್ದಾರೆ.
ಮಂಗಳವಾರ ಬೆಳಿಗ್ಗೆಯೇ ವೀರೇಂದ್ರ ಅವರ ಮನೆಗೆ ತೆರಳಿದ್ದ ಇ.ಡಿ ಅಧಿಕಾರಿಗಳು, ದಾಖಲೆಗಳಿಗಾಗಿ ಹುಡುಕಾಡಿದ್ದಾರೆ. ಇ.ಡಿ ಕಸ್ಟಡಿಯಲ್ಲಿ ಇರುವ ವೀರೇಂದ್ರ ಅವರ ಹೇಳಿಕೆಗಳ ಆಧಾರದಲ್ಲಿ ತನಿಖಾಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.