ADVERTISEMENT

7ನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ–3 ದಿನದಲ್ಲಿ ನಿರ್ಧಾರ?

​ಪ್ರಜಾವಾಣಿ ವಾರ್ತೆ
Published 8 ನವೆಂಬರ್ 2019, 19:52 IST
Last Updated 8 ನವೆಂಬರ್ 2019, 19:52 IST
   

ಬೆಂಗಳೂರು: ಏಳನೇ ತರಗತಿಗೆ ಪಬ್ಲಿಕ್‌ ಪರೀಕ್ಷೆ ನಡೆಸುವ ಸಂಬಂಧ ಸೋಮವಾರದೊಳಗೆ ಸರ್ಕಾರದ ಸ್ಪಷ್ಟ ನಿರ್ಧಾರ ಹೊರಬೀಳುವ ಸಾಧ್ಯತೆ ಇದೆ.

‘ಪಬ್ಲಿಕ್‌ ಪರೀಕ್ಷೆಯ ಪ್ರಸ್ತಾವ ಇಲಾಖೆಯ ಬಳಿ ಇದ್ದೇ ಇದೆ. ಇದರ ಬಗ್ಗೆ ಚರ್ಚೆ, ಸಮಾಲೋಚನೆ ನಡೆಯುತ್ತಿದೆ. ಸೋಮವಾರ ಇದರ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ಇದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು.

ತಿಂಗಳ ಹಿಂದೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್‌ ಕುಮಾರ್‌ ಅವರು ಪಬ್ಲಿಕ್ ಪರೀಕ್ಷೆ ನಡೆಸುವ ವಿಷಯ ಬಹಿರಂಗಪಡಿಸಿದ್ದರು. ಆದರೆ ಬಳಿಕ ಯಾವುದೇ ಬೆಳವಣಿಗೆಯೂ ನಡೆದಿರಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.