ADVERTISEMENT

ವಿದ್ಯಾರ್ಥಿಗಳಿಗೆ ಆಹಾರ ಧಾನ್ಯ ವಿತರಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 9 ಜನವರಿ 2022, 18:21 IST
Last Updated 9 ಜನವರಿ 2022, 18:21 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್‌ ಕಾರಣಕ್ಕೆ ಸೆಪ್ಟೆಂಬರ್‌ ಮತ್ತು ಅಕ್ಟೋಬರ್‌ ತಿಂಗಳಲ್ಲಿ ತರಗತಿಗಳು ನಡೆಯದ ಕಾರಣ ಈ ಅವಧಿಯಲ್ಲಿನ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳಿಗೆ ವಿತರಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

1 ರಿಂದ 10ನೇ ತರಗತಿಯ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗೆ ಆಹಾರ ಧಾನ್ಯಗಳನ್ನು ವಿತರಿಸುವಂತೆ ಸೂಚಿಸಲಾಗಿದೆ.

ಬಿಸಿಯೂಟದ ಬದಲಿಗೆ ಆಹಾರ ಭದ್ರತಾ ಕಾಯ್ದೆ– 2013 ಮತ್ತು ಮಧ್ಯಾಹ್ನ ಉಪಾಹಾರ ಯೋಜನೆ ನಿಯಮಗಳು– 2015ರ ಅನ್ವಯ ಈ ಕ್ರಮಕೈಗೊಳ್ಳುವಂತೆ
ಸೂಚಿಸಲಾಗಿದೆ.

ADVERTISEMENT

ಸೆಪ್ಟೆಂಬರ್‌ ತಿಂಗಳಲ್ಲಿ 25 ದಿನಗಳು ಮತ್ತು ಅಕ್ಟೋಬರ್‌ ತಿಂಗಳಲ್ಲಿ 16 ದಿನಗಳ ಆಹಾರ ಧಾನ್ಯಗಳ ವಿತರಿಸಬೇಕು ಎಂದು ತಿಳಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.