ADVERTISEMENT

ಧಾರವಾಡ ಆಯುಕ್ತಾಲಯ ವ್ಯಾಪ್ತಿಯ ಬೋಧಕ ಹುದ್ದೆಗಳ ಭರ್ತಿಗೆ ಅನುಮತಿ

​ಪ್ರಜಾವಾಣಿ ವಾರ್ತೆ
Published 22 ಏಪ್ರಿಲ್ 2022, 19:46 IST
Last Updated 22 ಏಪ್ರಿಲ್ 2022, 19:46 IST
   

ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಧಾರವಾಡ ಆಯುಕ್ತಾಲಯ ವ್ಯಾಪ್ತಿಯ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ಶಿಕ್ಷಕರ ನೇಮಕಕ್ಕೆ ಸರ್ಕಾರ ಅನುಮತಿ ನೀಡಿದೆ.

ಈ ಪ್ರೌಢಶಾಲೆಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಇತ್ಯಾದಿ ಕಾರಣ ಗಳಿಂದ 2015ರ ಡಿಸೆಂಬರ್‌ 31ರ ಅಂತ್ಯಕ್ಕೆ ಖಾಲಿ ಉಳಿದಿರುವ ಬೋಧಕ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಒಪ್ಪಿಗೆ ಸೂಚಿಸಲಾಗಿದೆ. ಒಟ್ಟು 318 ಬೋಧಕ ಹುದ್ದೆಗಳ ಪೈಕಿ ಈಗಾಗಲೇ 114 ಹುದ್ದೆಗಳ ನೇಮಕಾತಿಗೆ ಅನು ಮೋದನೆ ನೀಡಲಾಗಿತ್ತು. ಈ ಹುದ್ದೆಗಳನ್ನು ಹೊರತುಪಡಿಸಿ ಬಾಕಿ ಉಳಿದಿರುವ 204 ಬೋಧಕ ಹುದ್ದೆ ಗಳನ್ನು ಸಂಬಂಧಿಸಿದ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿಗಳು ನಿಯಮಾನುಸಾರ ನೇಮಕಾತಿ ಮಾಡಿಕೊಳ್ಳಬಹುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT