ADVERTISEMENT

ಖಜಾನೆ ಖಾಲಿ: ಜಟಾಪಟಿ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2018, 19:41 IST
Last Updated 11 ಡಿಸೆಂಬರ್ 2018, 19:41 IST

ಬೆಳಗಾವಿ: ‘ಉನ್ನತ ಶಿಕ್ಷಣ ಇಲಾಖೆಯಲ್ಲಿರುವವರು ಕತ್ತೆ ಕಾಯುತ್ತಿದ್ದೀರಾ’ ಹಾಗೂ ‘ಸರ್ಕಾರದ ಖಜಾನೆ ಖಾಲಿಯಾಗಿದೆ’ ಎಂಬ ಬಿಜೆಪಿಯ ಜೆ.ಸಿ.ಮಾಧುಸ್ವಾಮಿ ಅವರ ಹೇಳಿಕೆ ಮೈತ್ರಿ ಸರ್ಕಾರದ ಶಾಸಕರು ಹಾಗೂ ಬಿಜೆಪಿ ಶಾಸಕರ ಮಧ್ಯೆ ವಿಧಾನಸಭೆಯಲ್ಲಿ ಜಟಾಪಟಿಗೆ ಕಾರಣವಾಯಿತು.

ಪ್ರಶ್ನೋತ್ತರ ಅವಧಿಯಲ್ಲಿ ಮಾಧುಸ್ವಾಮಿ ಅವರು ‘ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿ ಹುದ್ದೆಗಳು ಖಾಲಿ
ಇವೆ. 25 ವರ್ಷಗಳಿಂದ ಹುದ್ದೆಗಳ ಭರ್ತಿ ಮಾಡಿಲ್ಲ’ ಎಂದು ಗಮನ ಸೆಳೆದರು. ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ, ‘2009ರಿಂದ ಈ ಹುದ್ದೆಗಳು ಖಾಲಿ ಇವೆ’ ಎಂದು ಉತ್ತರಿಸಿದರು. ಸದನದಲ್ಲಿ ತಪ್ಪು ಉತ್ತರ ನೀಡಲಾಗಿದೆ ಎಂದು ಮಾಧುಸ್ವಾಮಿ ಆಕ್ಷೇಪಿಸಿದರು. ಮಾಧುಸ್ವಾಮಿ ನೆರವಿಗೆ ಬಿಜೆಪಿ ಸದಸ್ಯರು ನಿಂತರು. ಸುಮಾರು 10 ನಿಮಿಷ ವಾಕ್ಸಮರ ನಡೆಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT