ADVERTISEMENT

ಸಮವಸ್ತ್ರ ನಿಯಮ: ರಾಜ್ಯ ಸರ್ಕಾರದ ನಿಲುವು ಸ್ಪಷ್ಟ-ಸಚಿವ ಬಿ.ಸಿ. ನಾಗೇಶ್

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2022, 16:29 IST
Last Updated 8 ಫೆಬ್ರುವರಿ 2022, 16:29 IST
   

ಬೆಂಗಳೂರು: ರಾಜ್ಯದಲ್ಲಿ ಹಿಜಾಬ್ ಕುರಿತ ವಿವಾದ ಸೃಷ್ಟಿಯಾಗಿರುವ ಬೆನ್ನಲ್ಲೇ ಬುಧವಾರದಿಂದ ಮೂರು ದಿನಗಳ ಕಾಲಪ್ರೌಢಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್, ಎಲ್ಲರೂ ಶಾಂತಿ ಕಾಪಾಡುವಂತೆ ಕೋರಿದ್ದಾರೆ.

ತರಗತಿಗಳಲ್ಲಿ 'ಸಮವಸ್ತ್ರ ನಿಯಮ ಪಾಲಿಸಬೇಕು' ಎಂಬ ರಾಜ್ಯ ಸರ್ಕಾರದ ನಿಲುವು ಸ್ಪಷ್ಟವಾಗಿದೆ.

ADVERTISEMENT

ಈ ಕುರಿತು ಕೆಲ ವಿದ್ಯಾರ್ಥಿಗಳು ಸಲ್ಲಿಸಿರುವ ಅರ್ಜಿ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿದೆ.

ಶಾಂತಿ, ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 9-12ನೇ ತರಗತಿಗಳಿಗೆ ನಾಳೆಯಿಂದ 3 ದಿನ ರಜೆ ಘೋಷಿಸಲಾಗಿದೆ.

ಎಲ್ಲರೂ ಶಾಂತಿ ಕಾಪಾಡಲು ಕೋರಲಾಗಿದೆ ಎಂದು ಸಚಿವರು ಟ್ವೀಟ್ ಮಾಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.