ADVERTISEMENT

ಸಮವಸ್ತ್ರ ಧರಿಸದಿದ್ದರೆ ಕಾಲೇಜು ಪ್ರವೇಶಕ್ಕೆ ಅವಕಾಶವಿಲ್ಲ: ಬಿ.ಸಿ.ನಾಗೇಶ್‌

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2022, 10:57 IST
Last Updated 4 ಫೆಬ್ರುವರಿ 2022, 10:57 IST
ಬಿ.ಸಿ.ನಾಗೇಶ್‌
ಬಿ.ಸಿ.ನಾಗೇಶ್‌   

ಬೆಂಗಳೂರು: ಶಿಕ್ಷಣ ಬೇಕಾದರೆ ಸರ್ಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜಿನ ಪ್ರವೇಶಕ್ಕೆ ಅವಕಾಶವೇ ಇಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿ ಬಿ.ಸಿ.ನಾಗೇಶ್‌ ಪುನರುಚ್ಚರಿಸಿದ್ದಾರೆ.

‘ಧರ್ಮ ಪಾಲನೆಗೆ ನಮ್ಮ ವಿರೋಧವಿಲ್ಲ. ಆದರೆ ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು. ಆ ರೀತಿ ಬರುವಾಗ ಸಮವಸ್ತ್ರ ಧರಿಸಿಯೇ ಬರಬೇಕು’ ಎಂದು ಅವರು ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

ಶಿಕ್ಷಣ ಸಂಸ್ಥೆಗಳಲ್ಲಿ ಅಲ್ಲಿನ ನಿಯಮಗಳನ್ನು ಪಾಲಿಸಬೇಕು. ಈ ಸಂಬಂಧ ಹೈಕೋರ್ಟ್‌ ನೀಡುವ ತೀರ್ಪು ಆಧರಿಸಿ ಹೊಸ ನಿಯಮಗಳನ್ನು ಮಾಡುತ್ತೇವೆ. ಅಲ್ಲಿಯವರೆಗೆ ಈಗಿರುವ ನಿಯಮವೇ ಮುಂದುವರಿಯುತ್ತದೆ ಎಂದರು.

ADVERTISEMENT

ದೇಶದ ಸಮಗ್ರತೆ ಹಾಳು ಮಾಡಲು ಪಿತೂರಿ ನಡೆಯುತ್ತಿದೆ. ಹಿಜಾಬ್‌ ವಿವಾದ ಬಳಸಿ ಘರ್ಷಣೆ ಸೃಷ್ಟಿಸುವ ಹುನ್ನಾರವೂ ನಡೆದಿದೆ ಎಂದರು.

ಹಿಜಾಬ್‌ ಸಮರ್ಥಿಸಿ ಸಿದ್ಧರಾಮಯ್ಯ ಅವರು ಮಾತನಾಡಿದ್ದಾರೆ. ಈ ರೀತಿ ಮಾತನಾಡಲು ಅವರಿಗೆ ನಾಚಿಕೆ ಆಗಬೇಕು. ಓಟಿಗಾಗಿ ಅವರು ಯಾವ ಮಟ್ಟಕ್ಕೂ ಬೇಕಾದರೂ ಹೋಗುತ್ತಾರೆ. ಒಂದು ಸಮುದಾಯದ ಮತಕ್ಕಾಗಿ ಹೀಗೆಲ್ಲಾ ಮಾಡುತ್ತಿದ್ದಾರೆ. ಅವರ ಅವಧಿಯಲ್ಲೇ ಸಮವಸ್ತ್ರ ನಿಯಮ ಜಾರಿ ಮಾಡಿದ್ದಾರೆ ಎಂದು ಹರಿಹಾಯ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.