ADVERTISEMENT

ಕಲಿಕಾ ಚೇತರಿಕೆಯೊಂದಿಗೆ ಶಾಲೆಗಳ ಆರಂಭ: ಬಿ.ಸಿ. ನಾಗೇಶ್‌

​ಪ್ರಜಾವಾಣಿ ವಾರ್ತೆ
Published 10 ಮೇ 2022, 19:30 IST
Last Updated 10 ಮೇ 2022, 19:30 IST
ಬಿ.ಸಿ. ನಾಗೇಶ್‌
ಬಿ.ಸಿ. ನಾಗೇಶ್‌   

ಬೆಂಗಳೂರು: ಮೇ 16 ರಿಂದ ಕಲಿಕಾ ಚೇತರಿಕೆ ಕಾರ್ಯಕ್ರಮದೊಂದಿಗೆ ರಾಜ್ಯದಾದ್ಯಂತ ಶಾಲೆಗಳು ಪುನರಾರಂಭ ಆಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ತಿಳಿಸಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋವಿಡ್‌ ಕಾರಣದಿಂದ ಎರಡು ವರ್ಷಗಳಿಂದ ಶಾಲೆಗಳಲ್ಲಿ ತರಗತಿಗಳು ಸರಿಯಾಗಿ ನಡೆದಿಲ್ಲ. ಕಲಿಕೆಯಲ್ಲಿನ ಹಿನ್ನಡೆಯನ್ನು ನಿವಾರಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ರಾಜ್ಯದ ಯೋಜನೆಯನ್ನು ಇತರ ರಾಜ್ಯಗಳೂ ಅನುಸರಿಸುತ್ತಿವೆ ಎಂದು ತಿಳಿಸಿದರು.

ಸಾರ್ವಜನಿಕ ಶಿಕ್ಷಣ ಇಲಾಖೆಯು ಸರ್ಕಾರಿ ಶಾಲೆಗಳಿಗೆ ಸೀಮಿತವಾಗಿ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಸುತ್ತಿದೆ. ಖಾಸಗಿ ಮತ್ತು ಅನುದಾನಿತ ಶಿಕ್ಷಣ ಸಂಸ್ಥೆಗಳೂ ಈ ಕಾರ್ಯಕ್ರಮ ಅನುಷ್ಠಾನಗೊಳಿಸಲು ಬಯಸಿದರೆ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.

ADVERTISEMENT

ಮೂರನೇ ವಾರ ಫಲಿತಾಂಶ: ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಮೌಲ್ಯಮಾಪನ ಅಂತಿಮ ಹಂತದಲ್ಲಿದೆ. ಮೇ ಮೂರನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.