ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ | ಪರಿಸ್ಥಿತಿ ಅವಲೋಕಿಸಿ ನಿರ್ಧಾರ: ಸುರೇಶ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 14 ಏಪ್ರಿಲ್ 2021, 11:09 IST
Last Updated 14 ಏಪ್ರಿಲ್ 2021, 11:09 IST
ಎಸ್‌. ಸುರೇಶ್‌ ಕುಮಾರ್‌
ಎಸ್‌. ಸುರೇಶ್‌ ಕುಮಾರ್‌    

ಬೆಂಗಳೂರು: ‘ಸಿಬಿಎಸ್‌ಇ ರೀತಿಯಲ್ಲಿ ರಾಜ್ಯದಲ್ಲಿಯೂ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದುಪಡಿಸುವ ಅಥವಾ 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡುವ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

‘ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಜೂನ್‌ 21ರಿಂದ ಆರಂಭಿಸಲು ಸರ್ಕಾರ ಈಗಾಗಲೇ ನಿರ್ಧರಿಸಿದೆ. ಮುಂದಿನ ದಿನಗಳಲ್ಲಿ ಪರಿಸ್ಥಿತಿ ಅವಲೋಕಿಸಿ, ಪರೀಕ್ಷೆಗಳನ್ನು ನಡೆಸುವ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು’ ಎಂದೂ ಅವರು ಹೇಳಿದ್ದಾರೆ.

ಸಿಬಿಎಸ್‌ಇ 10ನೇ ತರಗತಿಯ ಬೋರ್ಡ್‌ ಪರೀಕ್ಷೆ ರದ್ದುಪಡಿಸಲು ಹಾಗೂ 12ನೇ ತರಗತಿಯ ಪರೀಕ್ಷೆಗಳನ್ನು ಮುಂದೂಡಲು ತೀರ್ಮಾನಿಸಿದ ಬೆನ್ನಲ್ಲೆ, ರಾಜ್ಯದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳ ಕುರಿತು ಊಹಾಪೋಹಗಳು ಏಳತೊಡಗಿದೆ. ಈ ಹಿನ್ನೆಲೆಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.

ADVERTISEMENT

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.