ADVERTISEMENT

ಆಗಸ್ಟ್ ಮೊದಲ ವಾರ ಎಸ್ಸೆಸ್ಸೆಲ್ಸಿ ಫಲಿತಾಂಶ: ಸುರೇಶ್‌ ಕುಮಾರ್‌

​ಪ್ರಜಾವಾಣಿ ವಾರ್ತೆ
Published 20 ಜುಲೈ 2020, 18:46 IST
Last Updated 20 ಜುಲೈ 2020, 18:46 IST
ಸುರೇಶ್‌ ಕುಮಾರ್‌
ಸುರೇಶ್‌ ಕುಮಾರ್‌   

ಬೆಂಗಳೂರು: ‘ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಇನ್ನು 10 ದಿನಗಳಲ್ಲಿ ಪೂರ್ಣಗೊಳ್ಳಲಿದ್ದು, ಆಗಸ್ಟ್ ಮೊದಲ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಉದ್ದೇಶಿಸಲಾಗಿದೆ’ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದರು.

ನಗರದ ವಿವಿಧೆಡೆಸೋಮವಾರ ಐದು ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಮಾತನಾಡಿದ ಅವರು, ‘ರಾಜ್ಯದಾದ್ಯಂತ 220 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಯುತ್ತಿದೆ. ಈಗಾಗಲೇ 120 ಕೇಂದ್ರಗಳಲ್ಲಿ ಪ್ರಕ್ರಿಯೆ ಪೂರ್ಣಗೊಂಡಿದೆ. ಮುಂದಿನ ಎರಡು ದಿನಗಳಲ್ಲಿ ಇನ್ನೂ 60 ಕೇಂದ್ರಗಳಲ್ಲಿ ಮುಗಿಯಲಿದೆ’ ಎಂದರು.

‘ಲಾಕ್‌ಡೌನ್‌ ಕಾರಣದಿಂದ ಬೆಂಗಳೂರು ನಗರದ 28 ಕೇಂದ್ರಗಳಲ್ಲಿ ಶೇ 45ರಷ್ಟು ಶಿಕ್ಷಕರು ಮಾತ್ರ ಮೌಲ್ಯಮಾಪನಕ್ಕೆ ಹಾಜರಾಗಿದ್ದಾರೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.