ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಏ.14ರ ನಂತರ ಹೊಸ ವೇಳಾಪಟ್ಟಿ: ಸಚಿವ ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 21:00 IST
Last Updated 1 ಏಪ್ರಿಲ್ 2020, 21:00 IST
ಎಸ್.ಸುರೇಶ್ ಕುಮಾರ್
ಎಸ್.ಸುರೇಶ್ ಕುಮಾರ್   

ಚಾಮರಾಜನಗರ: ಕೊರೊನಾ ವೈರಸ್‌ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ, ಮುಂದೂಡಲಾಗಿರುವ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯ ಹೊಸ ದಿನಾಂಕವನ್ನು ಏಪ್ರಿಲ್‌ 14ರ ನಂತರ ನಿಗದಿಪಡಿಸಲಾಗುವುದು ಎಂದು ಸಚಿವ ಎಸ್‌. ಸುರೇಶ್ ಕುಮಾರ್ ಹೇಳಿದರು.

‘ಈಗಾಗಲೇ ಬಹಳಷ್ಟು ಮಕ್ಕಳು ಪರೀಕ್ಷೆಗೆ ತಯಾರಾಗಿದ್ದಾರೆ. ಪರಿಸ್ಥಿತಿ ಅವಲೋಕಿಸಿ 14ರ ನಂತರ ಹೊಸ ವೇಳಾಪಟ್ಟಿ ಘೋಷಣೆ ಮಾಡಲಾಗುವುದು. ಪರೀಕ್ಷೆ ಮುಂದೂಡಿರುವುದರಿಂದ ಯಾರೂ ನಿರಾಶರಾಗಬಾರದು. ಕೊರೊನಾ ಸೋಂಕಿನ ವಿರುದ್ಧ ಹೋರಾಡುವುದೂ ಒಂದು ಪರೀಕ್ಷೆಯಾಗಿದೆ. ಯಾರೂ ಮನೆಯಿಂದ ಹೊರಬರಬಾರದು. ಪ್ರತಿನಿತ್ಯ ಇನ್ನಷ್ಟು ಪುಸ್ತಕಗಳನ್ನು ಓದಿ ಹೆಚ್ಚಿನ ಜ್ಞಾನವನ್ನು ಪಡೆದುಕೊಳ್ಳಬೇಕು. ಮಕ್ಕಳ ಆತಂಕದ ಬಗ್ಗೆ ತಿಳಿದಿದ್ದು, ಸರ್ಕಾರ ಅವರ ಜೊತೆ ಯಾವಾಗಲೂ ಇರುತ್ತದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT