ADVERTISEMENT

ಶಾಲಾ-ಕಾಲೇಜು ದಾಖಲಾತಿ ಫೆ. 20ರವರೆಗೆ ವಿಸ್ತರಣೆ: ಎಸ್. ಸುರೇಶ್ ಕುಮಾರ್

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2021, 11:23 IST
Last Updated 6 ಫೆಬ್ರುವರಿ 2021, 11:23 IST
ಎಸ್. ಸುರೇಶ್ ಕುಮಾರ್
ಎಸ್. ಸುರೇಶ್ ಕುಮಾರ್   

ಬೆಂಗಳೂರು: ಪ್ರಸ್ತುತ ಶೈಕ್ಷಣಿಕ ವರ್ಷದ ತಡವಾಗಿ ಆರಂಭವಾಗಿರುವ ಕಾರಣ ತರಗತಿಗಳಿಗೆ ವಿದ್ಯಾರ್ಥಿಗಳ ದಾಖಲಾತಿಯನ್ನು ಇದೇ 20ರವರೆಗೆ ವಿಸ್ತರಿಸುವಂತೆ ಶಾಲಾ ಕಾಲೇಜುಗಳಿಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ-ಕಾಲೇಜುಗಳು ಫೆ. 1ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭಗೊಂಡಿವೆ. 9ರಿಂದ 12ನೇ ತರಗತಿವರೆಗೆ ಭೌತಿಕ ತರಗತಿಗಳು ಆರಂಭವಾಗಿದ್ದರೆ, ಉಳಿದ ತರಗತಿಗಳು ಪರ್ಯಾಯ ಬೋಧನೆಯಲ್ಲಿ ನಡೆಯುತ್ತಿವೆ. ರಾಜ್ಯದ ವಿವಿಧ ಭಾಗಗಳ ವಿದ್ಯಾರ್ಥಿಗಳು ತಾವು ಬಯಸಿದ ಕಾಲೇಜುಗಳಲ್ಲಿ ದಾಖಲಾತಿ ಪಡೆಯುವ ಪ್ರಕ್ರಿಯೆಯಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ವರ್ಷದ ದಾಖಲಾತಿಗೆ ಫೆ. 6 ಕೊನೆಯ ದಿನವಾಗಿದ್ದು, ಹವು ವಿದ್ಯಾರ್ಥಿಗಳು ಇನ್ನೂ ತರಗತಿಗಳಿಗೆ ದಾಖಲಾಗಲು ಸಾಧ್ಯವಾಗಿಲ್ಲ. ಈ ವರ್ಷ ತರಗತಿಗಳು ತಡವಾಗಿ ಆರಂಭವಾಗಿರುವುದರಿಂದ ದಾಖಲಾತಿಗೆ ಸಮಯ ನೀಡಬೇಕೆಂದು ಕೋರಿ ರಾಜ್ಯದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಪೋಷಕರು ಮತ್ತು ಜನಪ್ರತಿನಿಧಿಗಳಿಂದ ಪ್ರಸ್ತಾವನೆಗಳು ಬಂದಿವೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ದಾಖಲಾತಿಯನ್ನು 20ರವರೆಗೆ ವಿಸ್ತರಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮತ್ತು ಪದವಿ ಪೂರ್ವಶಿಕ್ಷಣ ಇಲಾಖೆ ನಿರ್ದೇಶಕರಿಗೆ ಸಚಿವರು ಸೂಚಿಸಿದ್ದಾರೆ.

ADVERTISEMENT

ಎಲ್ಲ ತರಗತಿಗಳ ಸೇರ್ಪಡೆಗೆ ದಾಖಲಾತಿಯನ್ನು ಕಡ್ಡಾಯಗೊಳಿಸಲಾಗಿದೆ. ಹೀಗಾಗಿ ವಿದ್ಯಾರ್ಥಿಗಳ ದಾಖಲಾತಿಗೆ ಅನುಕೂಲ ಕಲ್ಪಿಸಲು ಪ್ರಸ್ತುತ ವರ್ಷದ ಶಾಲಾಕಾಲೇಜುಗಳ ದಾಖಲಾತಿ ಪ್ರವೇಶ ಅವಧಿಯನ್ನು ವಿಸ್ತರಿಸಬೇಕ ಎಂದು ಸುರೇಶ್ ಕುಮಾರ್ ನಿರ್ದೇಶನ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.