ADVERTISEMENT

ಪರಿಸ್ಥಿತಿ ನೋಡಿ ರಜೆ ಘೋಷಣೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌

​ಪ್ರಜಾವಾಣಿ ವಾರ್ತೆ
Published 8 ಫೆಬ್ರುವರಿ 2022, 10:05 IST
Last Updated 8 ಫೆಬ್ರುವರಿ 2022, 10:05 IST
   

ಬೆಂಗಳೂರು: ರಾಜ್ಯದಲ್ಲಿ ಕೇಸರಿ ಶಾಲು– ಹಿಜಾಬ್ ವಿವಾದ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಪೋಷಕರ ಮಧ್ಯೆ ಸಂಘರ್ಷದ ಹಂತಕ್ಕೆ ತಲುಪಿರುವುದರಿಂದ ಪರಿಸ್ಥಿತಿ ನೋಡಿಕೊಂಡು ಶಿಕ್ಷಣ ಸಂಸ್ಥೆಗಳಿಗೆ ರಜೆ ಘೊಷಿಸುವ ಅಧಿಕಾರವನ್ನು ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ, ಶಿಕ್ಷಣಾಧಿಕಾರಿಗಳಿಗೆ ನೀಡಲಾಗಿದೆ.

ಸ್ಥಳೀಯ ಪರಿಸ್ಥಿತಿಗೆ ತಕ್ಕಂತೆ ರಜೆ ಘೋಷಿಸುವಂತೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಈ ಸೂಚನೆ ನೀಡಿದ್ದಾರೆ.

‘ಶಿವಮೊಗ್ಗ ಮತ್ತು ಬಾಗಕೋಟೆ ಜಿಲ್ಲೆಗಳಲ್ಲಿ ಪರಿಸ್ಥಿತಿ ಕೈಮೀರುವ ಹಂತ ತಲುಪಿದೆ. ಈ ಹಿನ್ನೆಲೆಯಲ್ಲಿ ಆಯಾ ಜಿಲ್ಲಾ ಶಿಕ್ಷಣಾಧಿಕಾರಿಗೆ ರಜೆ ಘೋಷಿಸುವ ಅಧಿಕಾರ ನೀಡಲಾಗಿದೆ’ ಎಂದು ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.