ADVERTISEMENT

ಗೋಪಿನಾಥಂನಲ್ಲಿ 19ರಂದು ಶಿಕ್ಷಣ ಸಚಿವರ ವಾಸ್ತವ್ಯ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2019, 22:34 IST
Last Updated 15 ನವೆಂಬರ್ 2019, 22:34 IST
ಬೆಂಗಳೂರಿನ 'ಪ್ರಜಾವಾಣಿ’ ಕಚೇರಿಯಲ್ಲಿ ಶನಿವಾರ ಆಯೋಜಿಸಿದ್ದ ‘ಫೋನ್–ಇನ್’ ಕಾರ್ಯಕ್ರಮದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಭಾಗವಹಿಸಿ ಮಾತನಾಡಿದರು -ಪ್ರಜಾವಾಣಿ ಚಿತ್ರ/ ರಂಜು ಪಿ PHOTO/ Ranju Pಸುರೇಶಕುಮಾರ್‌

ಚಾಮರಾಜನಗರ: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್‌.ಸುರೇಶ್‌ ಕುಮಾರ್‌ ಅವರು ನ.19ರಂದು ಹನೂರು ತಾಲ್ಲೂಕಿನ ಗೋಪಿನಾಥಂನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಸೆಪ್ಟೆಂಬರ್‌ 19ರಂದು ಪಾವಗಡದ ಸರ್ಕಾರಿ ಶಾಲೆಯಲ್ಲಿ ಸಚಿವರು ವಾಸ್ತವ್ಯ ಹೂಡಿದ್ದರು. ಈ ಬಾರಿಯೂ ಅವರು ಗಡಿ ಪ್ರದೇಶದ ಶಾಲೆಯನ್ನೇ ಆಯ್ಕೆ ಮಾಡಿದ್ದಾರೆ.ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 1ರಿಂದ 4ನೇ ತರಗತಿವರೆಗೆ ತಮಿಳು ಮಾಧ್ಯಮದಲ್ಲಿ ಶಿಕ್ಷಣ ನೀಡಲಾಗುತ್ತಿದ್ದು, 5ರಿಂದ 8ರವರೆಗೆ ಕನ್ನಡ ಮಾಧ್ಯಮದಲ್ಲಿ ಬೋಧಿಸಲಾಗುತ್ತಿದೆ. 213 ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT