ADVERTISEMENT

ಫೆಂಜಲ್‌ ಚಂಡಮಾರುತ ಪರಿಣಾಮ: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನಿರಂತರ ಮಳೆ– ಚಳಿ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2024, 11:28 IST
Last Updated 3 ಡಿಸೆಂಬರ್ 2024, 11:28 IST

‘ಫೆಂಜಲ್‌’ ಚಂಡಮಾರುತದ ಪರಿಣಾಮ ರಾಜ್ಯದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದೆ. ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸೋಮವಾರವೂ ಬಿಡುವು ಕೊಟ್ಟಿಲ್ಲ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆರಾಯನ ಅಬ್ಬರ ಜೋರಾಗಿದ್ದು, ಹಲವೆಡೆ ಗುಡ್ಡ ಕುಸಿದಿದೆ. ಮನೆಗಳಿಗೆ ನೀರು ನುಗ್ಗಿದೆ. ಮೈಸೂರಿನಲ್ಲಿ ಚಾಮುಂಡಿ ಬೆಟ್ಟದ ರಸ್ತೆಯಲ್ಲಿ ಗುಡ್ಡ ಕುಸಿದು ಸಣ್ಣ ಬಂಡೆಯೊಂದು ರಸ್ತೆಗೆ ಉರುಳಿದೆ. ಸದ್ಯ, ಬಂಡೆ ತೆರವುಗೊಳಿಸಲಾಗಿದ್ದು, ವಾಹನ ಸಂಚಾರ ಎಂದಿನಂತಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.