ADVERTISEMENT

ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆತ: ವಿಚಾರಣೆಗೆ ತಡೆ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2022, 22:31 IST
Last Updated 22 ಡಿಸೆಂಬರ್ 2022, 22:31 IST
   

ಬೆಂಗಳೂರು: ಕೊಡಗು ಜಿಲ್ಲೆಯ ಮಳೆಹಾನಿ ಪ್ರದೇಶಗಳ ಪರಿಶೀಲನೆಗಾಗಿ ಪ್ರವಾಸ ಕೈಗೊಂಡಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳ ವಿರುದ್ಧದ ವಿಚಾರಣಾ ನ್ಯಾಯಾಲಯದ ಪ್ರಕ್ರಿಯೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.

ಈ ಸಂಬಂಧ ಆರೋಪಿಗಳಾದ ಎನ್.ಡಿ. ಸಂಪತ್‌ಕುಮಾರ್ ಮತ್ತು ಬಿ.ಎಂ.ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರಿದ್ದ ರಜಾಕಾಲದ ಏಕಸದಸ್ಯ ನ್ಯಾಯಪೀಠ ಈ ಆದೇಶ ನೀಡಿದೆ.

ಪ್ರಕರಣವೇನು?: ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ಆಗಸ್ಟ್ 18ರಂದು ಸಿದ್ದರಾಮಯ್ಯ ಭೇಟಿ ನೀಡಿದ್ದರು. ಸಾವರ್ಕರ್ ವಿರುದ್ಧ ಅವರು ನೀಡಿದ್ದ ಹೇಳಿಕೆ ಖಂಡಿಸಿ ಬಿಜೆಪಿ ಯುವ ಮೋರ್ಚಾ ಕುಶಾಲನಗರದಲ್ಲಿ ಪ್ರತಿಭಟನೆ ನಡೆಸಿತ್ತು. ಸಿದ್ದರಾಮಯ್ಯ ಅದೇ ಮಾರ್ಗದಲ್ಲಿ ಕಾರಿನಲ್ಲಿ ತೆರಳುತ್ತಿದ್ದಾಗ, ಕೆಲವರು ಅವರಿದ್ದ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.