ಮೈಸೂರು: ‘ಶಾಲೆಗಳಲ್ಲಿ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವ ಮಠಾಧೀಶರು, ಮೊಟ್ಟೆ ತಿನ್ನುವ ಭಕ್ತರಿಂದ ಕಾಣಿಕೆಗಳನ್ನು ಕಡ್ಡಾಯವಾಗಿ ಸ್ವೀಕರಿಸಬಾರದು’ ಎಂದು ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ಅಧ್ಯಕ್ಷ ಕೆ.ಎಸ್.ಶಿವರಾಮು ಆಗ್ರಹಿಸಿದರು.
‘ಮೊಟ್ಟೆ ಸೇವಿಸುವವರು ಕಾಣಿಕೆ ನೀಡಬಾರದು ಎಂದು ಮಠಗಳಲ್ಲಿ ಮೊದಲು ಫಲಕ ಅಳವಡಿಸಬೇಕು. ಮೊಟ್ಟೆ ಸೇವಿಸುವವರು ಹಾಗೂ ಮಾರುವವರ ಕಾಣಿಕೆಗಳನ್ನು ಪಡೆಯುವ ಮಠಗಳು, ಶಾಲಾ ಮಕ್ಕಳಿಗೆ ಮೊಟ್ಟೆ ನೀಡುವುದನ್ನು ವಿರೋಧಿಸುವುದು ಸರಿಯಲ್ಲ. ಅಂಥ ಸ್ವಾಮೀಜಿಗಳು ಮಠಾಧೀಶರಾಗಲು ನಾಲಾಯಕ್’ ಎಂದು ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
‘ಮೊಟ್ಟೆ ನೀಡುವುದನ್ನು ವಿರೋಧಿಸಿ ಕೆಲವು ಮಠಾಧೀಶರು ಸಮಾವೇಶ ಮಾಡಲು ಹೊರಟಿರುವುದು ನಾಚಿಕೆಗೇಡಿನ ಸಂಗತಿ. ಈ ರೀತಿ ರಾಜಕಾರಣ ಮಾಡುತ್ತಿರುವ ಮಠಾಧೀಶರು ಮೊದಲು ತಮ್ಮ ಕಾವಿ ಕಳಚಿ ನಂತರ ರಾಜಕಾರಣ ಮಾಡಲಿ’ ಎಂದು ಸವಾಲೆಸೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.