ADVERTISEMENT

ಚಂದ್ರ ದರ್ಶನ: ಬುಧವಾರವೇ ಈದ್‌ ಉಲ್‌ ಫಿತ್ರ್‌ ಆಚರಣೆ

​ಪ್ರಜಾವಾಣಿ ವಾರ್ತೆ
Published 5 ಜೂನ್ 2019, 11:23 IST
Last Updated 5 ಜೂನ್ 2019, 11:23 IST
   

ಬೆಂಗಳೂರು: ಎಲ್ಲೆಡೆಮಂಗಳವಾರ ರಾತ್ರಿಯೇ ಚಂದ್ರ ದರ್ಶನವಾಗಿದ್ದು, ಬುಧವಾರ ರಾಜ್ಯಾದ್ಯಂತ ಈದ್‌ ಉಲ್‌ ಫಿತ್ರ್ ಆಚರಿಸಲು ನಿರ್ಧರಿಸಲಾಗಿದೆ ಎಂದು ಬೆಂಗಳೂರಿನ ಜಾಮಿಯಾ ಮಸೀದಿಯ ಖತೀಬ್ ಮೌಲಾನಾ ಮೊಹಮದ್ ಮಸೂದ್‌ ಇಮ್ರಾನ್ ರಶ್ದಿ ತಿಳಿಸಿದ್ದಾರೆ.

ವಕ್ಫ್ ಬೋರ್ಡ್ ಕಚೇರಿಯಲ್ಲಿ ರಾಜ್ಯ ಚಂದ್ರದರ್ಶನ ಸಮಿತಿಯು ಮಂಗಳವಾರ ರಾತ್ರಿ ಸಭೆ ನಡೆಸಿತು. ರಾಜ್ಯದಲ್ಲಿ ಚಂದ್ರದರ್ಶನವಾಗಿರುವ ಮಾಹಿತಿ ಲಭ್ಯವಾಗಿದೆ. ಹೀಗಾಗಿ ಬುಧವಾರವೇಈದುಲ್ ಫಿತ್ರ್ ಆಚರಿಸಲುಧಾರ್ಮಿಕ ಮುಖಂಡರು ತೀರ್ಮಾನಿಸಿದ್ದಾರೆ ಎಂದು ಮಸೂದ್‌ ಇಮ್ರಾನ್‌ ರಶ್ದಿಅವರು ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್, ಕಾಂಗ್ರೆಸ್‌ ಮುಖಂಡ ಬಾವಾಹಾಗೂ ಮುಸಲ್ಮಾನ್‌ ಧರ್ಮದ ಮುಖಂಡರು ಸಭೆಯಲ್ಲಿ ಭಾಗವಹಿಸಿದ್ದರು.

ADVERTISEMENT

ರಂಜಾನ್‌ ಹಿನ್ನೆಲೆಯಲ್ಲಿಹಬ್ಬದ ಸಾಮಗ್ರಿಗಳನ್ನು ಕೊಳ್ಳಲು ಮಾರುಕಟ್ಟೆಗಳಲ್ಲಿ ಜನ ಜಂಗುಳಿ ಇತ್ತು.

ಗಣ್ಯರ ಶುಭಾಶಯ

ಬುಧವಾರ ರಂಜಾನ್‌ ಆಚರಣೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಯೂ ಸೇರಿದಂತೆ ನಾಡಿನ ಹಿರಿಯ ಮುಖಂಡರು ಶುಭ ಕೋರಿದ್ದಾರೆ.

ನಾಡಿನ ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಶಯಗಳು.ಶಾಂತಿ ಸೌಹಾರ್ದತೆಯ ಪ್ರತೀಕವಾದ ರಂಜಾನ್ ನಾಡಿನ ಜನತೆಗೆ ಸುಖ, ಸಮೃದ್ಧಿಯನ್ನು ತರಲಿ .

- ಎಚ್‌.ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.