ರಾಜ್ಯ ಮಾನವ ಹಕ್ಕುಗಳ ಆಯೋಗ
ನವದೆಹಲಿ: ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನಿರಾಕರಿಸಿದ ಕಾರಣಕ್ಕೆ ವೃದ್ಧರೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಆರೋಗ್ಯ ಇಲಾಖೆ ಹಾಗೂ ಕರ್ನಾಟಕ ಸರ್ಕಾರಕ್ಕೆ ಮಾನವ ಹಕ್ಕು ಆಯೋಗ ನೋಟಿಸ್ ಜಾರಿ ಮಾಡಿದೆ.
ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿರುವ ಆಯೋಗವು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ನೋಟಿಸ್ ನೀಡಿದೆ. ನಾಲ್ಕು ವಾರಗಳಲ್ಲಿ ವಿಸ್ತೃತ ವರದಿ ನೀಡುವಂತೆ ಸೂಚಿಸಿದೆ. ಈ ಪ್ರಕರಣದಲ್ಲಿ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಆಗಿದೆ ಎಂದು ಆಯೋಗ ಅಭಿಪ್ರಾಯಪಟ್ಟಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.